ವಿಜಯಪುರ: ನಿಂತಿದ್ದ ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನರ್ಸ್ವೊಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಗರದ ಹೊರವಲಯದ ಆಕಾಶವಾಣಿ ಕೇಂದ್ರ ಬಳಿ ಬೆಳಗ್ಗೆ ಸಂಭವಿಸಿದೆ.
ಬಾಗೇವಾಡಿಯಿಂದ ನಸುಕಿನ ಜಾವ 5 ಗಂಟೆ ಸುಮಾರಿಗೆ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಈ ಅಪಘಾತ ಸಂಭವಿಸಿದೆ. ಸ್ಟಾಪ್ ನರ್ಸ್ ತುಳಸಿ ಎಂಬುವರ ತಲೆಗೆ ಗಂಭೀರ ಗಾಯವಾಗಿದೆ. ಡ್ರೈವರ್ ಶ್ರೀಶೈಲಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.
ಗರ್ಭಿಣಿಯನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.