ETV Bharat / state

ಭೀಮಾನದಿ ಪ್ರವಾಹ ಸಂತ್ರಸ್ತರ ಭೇಟಿ ಮಾಡಿ ಸಮಸ್ಯೆ ಆಲಿಸಿದ ಸಚಿವೆ ಜೊಲ್ಲೆ

ಪ್ರವಾಹ ಸಂತ್ರಸ್ತರ ಸಮಸ್ಯೆ ಆಲಿಸಿದ್ದೇನೆ. ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ, ಬೆಳೆ ಹಾನಿ ಸಮೀಕ್ಷೆಯನ್ನೂ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡುವುದಾಗಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ.

Sasikala Jolle visits to Bheemanadi Flood Victims
ಭೀಮಾನದಿ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದ ಶಶಿಕಲಾ ಜೊಲ್ಲೆ
author img

By

Published : Oct 18, 2020, 8:09 PM IST

ವಿಜಯಪುರ: ಭೀಮಾ ನದಿ ಪ್ರವಾಹದಿಂದ ನಲುಗಿ ಹೋಗಿರುವ ಇಂಡಿ ತಾಲೂಕಿನ ಅಗರಖೇಡ ಗ್ರಾಮಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಭೇಟಿ‌‌ ನೀಡಿದ್ದು, ಕಾಳಜಿ‌ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಸಂತ್ರಸ್ತ ಮಹಿಳೆಯರ ಸಮಸ್ಯೆ ಆಲಿಸಿದರು.

ಭೀಮಾನದಿ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿದ ಶಶಿಕಲಾ ಜೊಲ್ಲೆ

ಮಹಾರಾಷ್ಟ್ರದಿಂದ ಭಾರೀ ಪ್ರಮಾಣದಲ್ಲಿ ಭೀಮಾನದಿಗೆ ನೀರು ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ನದಿ ತೀರದ 8 ಸೇತುವೆಗಳು ಮುಳುಗಡೆಯಾಗಿದೆ. ಪ್ರವಾಹ ಪೀಡಿತರನ್ನು ವಿವಿಧೆಡೆ ಕಾಳಜಿ‌ ಕೇಂದ್ರದಲ್ಲಿ ಇರಿಸಲಾಗಿದೆ‌. ಹೀಗಾಗಿ, ನಿರಾಶ್ರಿತ ಮಹಿಳೆಯರ ಸಮಸ್ಯೆಯನ್ನು ಆಲಿಸಲು ಸಚಿವೆ ಶಶಿಕಲಾ ಜೊಲ್ಲೆ ಅಗರಖೇಡ ಕಾಳಜಿ‌‌ ಕೇಂದ್ರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಂತ್ರಸ್ತರು ಸಚಿವೆಯ ಎದುರು ಅಳಲು ತೋಡಿಕೊಂಡಿದ್ದು, ನಮ್ಮನ್ನು ಗ್ರಾಮದಿಂದ ಸುರಕ್ಷಿತವಾಗಿ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವೆ, ಎಲ್ಲರ ಸಮಸ್ಯೆ ಆಲಿಸಲಾಗಿದೆ. ಮನೆ ಕಳೆದುಕೊಂಡವರಿಗೆ ತಕ್ಷಣ ಪರಿಹಾರ ನೀಡಲು ವ್ಯವಸ್ಥೆ ಮಾಡಲಾಗಿದೆ. ಬೆಳೆ ಹಾನಿ ಸಮೀಕ್ಷೆಯನ್ನೂ ನಡೆಸಿ ಸೂಕ್ತ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಬೆಳಗ್ಗೆ 10 ಗಂಟೆಗೆ ಬರಬೇಕಾಗಿದ್ದ ಸಚಿವೆ ಜೊಲ್ಲೆ ಸುಮಾರು 3 ಗಂಟೆಯ ವೇಳೆಗೆ ಆಗಮಿಸಿದರು. ಇದಕ್ಕೂ ಮುನ್ನ ಅವರು ತಾಲೂಕಿನ ಮುಳುಗಡೆ ಪ್ರದೇಶಗಳಿಗೆ ಭೇಟಿ ನೀಡಲು ತೆರಳಿದ್ದರಿಂದ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.