ವಿಜಯಪುರ: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯದ ಅಟೆಂಡರ್ ಕೊರೊನಾದಿಂದ ಸಾವನ್ನಪ್ಪಿರುವ ಬೆನ್ನಲ್ಲೇ, ಇವರ ಪ್ರಾಥಮಿಕ ಸಂಪರ್ಕ ಹೊಂದಿದ್ದ 7 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ತಿಳಿಸಿದ್ದಾರೆ.
ಈಗಾಗಲೇ ಕೋವಿಡ್ ಕೇರ್ ಸೆಂಟರ್ನಲ್ಲಿ ಈ ಏಳು ಸೋಂಕಿತರ ಮೇಲೆ ಸೂಕ್ತ ನಿಗಾ ಮತ್ತು ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯಲ್ಲಿಂದು ಒಟ್ಟು 51 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. 30 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.