ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿಜಯಪುರ: ಹಣಕಾಸಿನ ವಿಚಾರಕ್ಕೆ ಯುವಕನ ಮೇಲೆ ಫೈರಿಂಗ್
ನಿನ್ನೆ ರಾತ್ರಿ ಮನಗೂಳಿ ಅಗಸಿಯ ಸ್ಮಶಾನದ ಬಳಿ ತುಳಸಿರಾಮ ಹರಿಜನ ಮತ್ತು ವಿಕಾಸ ಎಂಬವರು ಬುದ್ದು ರಾಠೋಡ್ ಎಂಬುವನ ಮೇಲೆ ಗುಂಡು ಹಾರಿಸಿ ನಂತರ ಚಾಕುವಿಂದ ಇರಿದು ಕೊಲೆಗೆ ಯತ್ನಿಸಿದ್ದರು.
ದಾಳಿಯಲ್ಲಿ ಗಾಯಗೊಂಡಿರುವ ಬುದ್ದು ರಾಠೋಡ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಎಸ್ಪಿ ಅನುಪಮ್ ಅಗರವಾಲ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.