ವಿಜಯಪುರ/ಸತಾರಾ: ಮಹಾರಾಷ್ಟ್ರದ ಕೃಷ್ಣಾ ನದಿ ಉಗಮ ಸ್ಥಾನದಲ್ಲಿ ಕನ್ನಡಿಗರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ, ಬಿಜೆಪಿ ಮುಖಂಡ ಸಂಗಣ್ಣ ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ವಿಶೇಷ ಪೂಜೆ ನಡೆಯಿತು.
ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಸತಾರಾ ಜಿಲ್ಲೆಯ ಕೃಷ್ಣಾ ನದಿ ಉಗಮ ಸ್ಥಾನದಲ್ಲಿರುವ ಮಹಾಬಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು. ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ ವಿಶೇಷ ಪೂಜೆ ಸಲ್ಲಿಸಿ, ಉತ್ತಮ ಮಳೆಯಾಗಲೆಂದು ಪ್ರಾರ್ಥಿಸಿದರು.