ವಿಜಯಪುರ: ಸರ್ಕಾರಿ ಬಸ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಉತ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಾಯಾಳುಗಳನ್ನು ವಿಜಯಪುರದ ಆಸ್ಪತ್ರಗಳಿಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬಸ್ ಚಾಲಕ ಸಿಲುಕಿಹಾಕಿಕೊಂಡು ನೋವಿನಿಂದ ನರಳಾಡಿದ್ದಾನೆ. ನಂತರ ಚಾಲಕನನ್ನು ಹೊರತೆಗೆಯಲು ಸಾರ್ವಜನಿಕರು ಪ್ರಯತ್ನಪಟ್ಟರೂ ಸಹ ಸಾಧ್ಯವಾಗದ ಹಿನ್ನೆಲೆ, ಪೊಲೀಸರು ಸ್ಥಳಕ್ಕೆ ಜೆಸಿಬಿ ತರಿಸಿ ಚಾಲಕನನ್ನು ರಕ್ಷಿಸಿದ್ದಾರೆ.