ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಕೋವಿಡ್-19 ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸಂಪರ್ಕಕ್ಕೆ ಬಂದಿರುವವರು ತಕ್ಷಣ ವೈದ್ಯಕೀಯ ಪರೀಕ್ಷೆಗೆ ಒಳಪಡುವಂತೆ ಸಿಇಒ ಮನವಿ ಮಾಡಿದ್ದಾರೆ.
ಅಲ್ಪ ಜ್ವರ ಮತ್ತು ಶೀತದಿಂದ ಬಳಲುತ್ತಿದ್ದ ಅವರು ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಕೋವಿಡ್ ದೃಢವಾಗಿದೆ. ರಕ್ತ ಮತ್ತು ಸಿಟಿ ಸ್ಕ್ಯಾನ್ ವರದಿ ಸಾಮಾನ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಸದ್ಯ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ಹೋಂ ಐಸೋಲೇಶನ್ನಲ್ಲಿರಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಸಂಪರ್ಕಕ್ಕೆ ಬಂದಿರುವವರು ತಕ್ಷಣ ಪರೀಕ್ಷಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.