ETV Bharat / state

ಪ್ರವಾಹ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ವಿಜಯಪುರ ಜಿಲ್ಲಾಡಳಿತ

ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಲಾಶಯದ ನೀರಿನ ಸಂಗ್ರಹದಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಜಲಾಶಯ ಅಪಾಯ ಮಟ್ಟ ತಲುಪದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.

Vijayapuram District Administration
ಪ್ರವಾಹ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡ ವಿಜಯಪುರ ಜಿಲ್ಲಾಡಳಿತ
author img

By

Published : Aug 7, 2020, 5:37 PM IST

ವಿಜಯಪುರ: ರಾಜ್ಯದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಕೊರೊನಾ ವೈರಸ್ ಜತೆ ಮಳೆ ಆರ್ಭಟವನ್ನು ಎದುರಿಸುವ ಸವಾಲು ಎದುರಾಗಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾದರೆ ಮೊದಲು ಭರ್ತಿಯಾಗುವುದು ಆಲಮಟ್ಟಿ ಜಲಾಶಯ. ಸದ್ಯ ಪ್ರವಾಹ ಪರಿಸ್ಥಿತಿ ಇಲ್ಲದಿದ್ದರೂ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಪ್ರವಾಹ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡ ವಿಜಯಪುರ ಜಿಲ್ಲಾಡಳಿತ

ಜಿಲ್ಲೆಯ ನಿಡಗುಂದಿ ತಾಲೂಕಿನ ಲಾಲ್ ಬಹದ್ದೂರ ಶಾಸ್ತ್ರಿ (ಆಲಮಟ್ಟಿ) ಜಲಾಶಯ ಸಾಮರ್ಥ್ಯ 123.81 ಟಿಎಂಸಿ ಯಷ್ಟು ಇದೆ. 519.60 ಮೀಟರ್ ನಷ್ಟು ಜಲಾಶಯದಲ್ಲಿ ಗರಿಷ್ಠ ನೀರು ಸಂಗ್ರಹಿಸಬಹುದಾಗಿದೆ. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಲಾಶಯದ ನೀರಿನ ಸಂಗ್ರಹದಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. ಜಲಾಶಯ ಅಪಾಯ ಮಟ್ಟ ತಲುಪದಂತೆ ಮುನ್ನಚ್ಚರಿಕೆ ಕ್ರಮವಾಗಿ ಹೆಚ್ಚಿನ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ. ಇದರ ಪರಿಣಾಮ ನಾರಾಯಣಪುರ ಹಿನ್ನೀರಿನಿಂದ ಜಿಲ್ಲೆಯ ಕೆಲ ತಾಲೂಕುಗಳಿಗೆ ನೀರು ನುಗ್ಗುವ ಸಂಭವವಿದೆ. ಈ ಕಾರಣ ಜಿಲ್ಲಾಡಳಿತ ಆಯಾ ತಾಲೂಕು ತಹಶೀಲ್ದಾರ್ ಮೂಲಕ ನದಿ ಪಾತ್ರದ ಜನತೆಗೆ ಎಚ್ಚರಿಕೆ ವಹಿಸಲು ಗ್ರಾಮಗಳಲ್ಲಿ ಡಂಗೂರ ಹೊರಡಿಸಲು ಸೂಚನೆ ನೀಡಿದೆ.

ಶುಕ್ರವಾರ ಮಧ್ಯಾಹ್ನದವರೆಗೆ ಆಲಮಟ್ಟಿ ಜಲಾಶಯಕ್ಕೆ 1.50ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ ಅಷ್ಟೇ ಪ್ರಮಾಣದಲ್ಲಿ ಜಲಾಶಯದಿಂದ ನೀರನ್ನು ಹೊರ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ಆಗಸ್ಟ್ ತಿಂಗಳಿನಲ್ಲಿ 5 ಲಕ್ಷ ಕ್ಯೂಸೆಕ್ ನೀರು ಒಳಹರಿವು ಹೆಚ್ಚಳವಾದ ಕಾರಣ ಮುದ್ದೇಬಿಹಾಳ, ನಿಡಗುಂದಿ ತಾಲೂಕಿನ 18 ಗ್ರಾಮದಲ್ಲಿ ಪ್ರವಾಹ ಬಂದು ಸಾರ್ವಜನಿಕ ಆಸ್ತಿ, ಪಾಸ್ತಿ ನಷ್ಟವಾಗಿತ್ತು. ಈ ಬಾರಿ ಮತ್ತೆ ಅದು ಮರುಕಳಿಸಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಮಹಾರಾಷ್ಟ್ರ ಸರ್ಕಾರ ನೇಮಕ ಮಾಡಿರುವ ಇಂಜಿನಿಯರ್ ಜತೆ ಜಿಲ್ಲಾಡಳಿತದ ಅಧಿಕಾರಿಗಳು ಸತತ ಸಂಪರ್ಕ ಹೊಂದಿದ್ದು, ಮಹಾರಾಷ್ಟ್ರದಿಂದ ಹೆಚ್ಚುವರಿ ನೀರು ಬಿಡುಗಡೆ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.