ವಿಜಯಪುರ: ಸಾರಿಗೆ ಮುಷ್ಕರ ಮುಂದುವರೆದ ಹಿನ್ನೆಲೆ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.
ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳೆಲ್ಲ ಮುಂದೂಡಿಕೆಯಾಗಿವೆ. ಏ. 19ರಿಂದ ಪರೀಕ್ಷೆಗಳು ನಡೆಯಬೇಕಿತ್ತು. ಸಾರಿಗೆ ಮುಷ್ಕರ ಹಿನ್ನೆಲೆ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಲು ತೊಂದರೆಯಾಗುವ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.
ಈ ಕುರಿತು ಮಹಿಳಾ ವಿವಿ ಸುತ್ತೋಲೆ ಹೊರಡಿಸಿದೆ ಎಂದು ಅಕ್ಕಮಹಾದೇವಿ ವಿಶ್ವವಿದ್ಯಾಲಯ ಕುಲಸಚಿವರು (ಮೌಲ್ಯಮಾಪನ) ಮಾಹಿತಿ ನೀಡಿದ್ದಾರೆ. ಪರೀಕ್ಷೆ ನಡೆಯುವ ಮುಂದಿನ ದಿನಾಂಕ ಶೀಘ್ರದಲ್ಲೇ ಪ್ರಕಟಿಸುವುದಾಗಿ ಅವರು ಸುತ್ತೋಲೆ ಹೊರಡಿಸಿದ್ದಾರೆ.