ವಿಜಯಪುರ: ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಕೊಲೆ ಯತ್ನ ಹಾಗೂ ಆತನ ಅಂಗರಕ್ಷಕ, ಕಾರು ಚಾಲಕನ ಕೊಲೆ ಪ್ರಕರಣಕ್ಕೆ ಬಂಧಿಸಿದಂತೆ ಮತ್ತೆ ಮೂವರನ್ನು ವಿಜಯಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಇಂಡಿ ತಾಲೂಕಿನ ದೇಗಿನಾಳ ಗ್ರಾಮದ ಸಂಘರ್ಷ ಸೂರ್ಯವಂಶಿ, ಉಮರಾಣಿಯ ಸಂಗಪ್ಪ ಯಮದೆ ಹಾಗೂ ವಿಜಯಪುರದ ಜಲನಗರದ ಚೇತನ ಶಿರಶ್ಯಾಡ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಏರ್ಗನ್, ಒಂದು ಬೈಕ್, ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
![ಭೀಮಾತೀರದ ಶೂಟೌಟ್ ಪ್ರಕರಣ](https://etvbharatimages.akamaized.net/etvbharat/prod-images/9525929_530_9525929_1605187785302.png)
ನವೆಂಬರ್ 2ರಂದು ವಿಜಯಪುರ ಹೊರ ವಲಯದ ಕನ್ನಾಳ ಕ್ರಾಸ್ ಬಳಿ ಮಹಾದೇವ ಸಾಹುಕಾರ ಹಾಗೂ ಆತನ ಬೆಂಬಲಿಗರನ್ನು ಅಡ್ಡಗಟ್ಟಿ ಗುಂಡಿನ ದಾಳಿ ನಡೆಸಿದ್ದರು. ಇದರಲ್ಲಿ ಸದ್ಯ ಮಹಾದೇವ ಸಾಹುಕಾರ ಭೈರಗೊಂಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈತನ ಇಬ್ಬರು ಬೆಂಬಲಿಗರು ಗುಂಡು ತಗುಲಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 16 ಜನರನ್ನು ಬಂಧಿಸಲಾಗಿದೆ. ಈಗ ಬಂಧನಕ್ಕೊಳಗಾಗಿರುವ ಮೂವರು ಸೇರಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.