ವಿಜಯಪುರ : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಕೊಠಡಿ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯುತ್ತಿದ್ದಾರೆ.
ನಗರದ ದರ್ಬಾರ ಪರೀಕ್ಷಾ ಕೇಂದ್ರಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಸನಕುಮಾರ ಭೇಟಿ ನೀಡಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಣೆ ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ಪರಿಶೀಲನೆ ನಡೆಸಿದರು. ಇನ್ನು ಕೇಂದ್ರಗಳಿಗೆ ಬಂದ ಎಲ್ಲ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಲಾಯಿತು.
ಜಿಲ್ಲೆಯಲ್ಲಿ 121 ಪರೀಕ್ಷಾ ಕೇಂದ್ರಗಳಿದ್ದು, 36,626 ವಿದ್ಯಾರ್ಥಿಗಳು ಇಂದು ಗಣಿತ ಪರೀಕ್ಷೆ ಬರೆಯುತ್ತಿದ್ದಾರೆ. ಕಂಟೇನ್ಮೆಂಟ್ ಝೋನ್‌ಗಳಿಂದ 103 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಹಾಜರಾಗುತ್ತಿದ್ದು, ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಿಸಲಾಗುತ್ತಿದೆ ಎಂದು ಡಿಡಿಪಿಐ ಪ್ರಸನ್ನಕುಮಾರ್ ಈ ಟಿವಿ ಭಾರತಕ್ಕೆ ಮಾಹಿತಿ ನೀಡಿದರು.