ETV Bharat / state

ಸಾಂಸ್ಥಿಕ ಕ್ವಾರಂಟೈನ್​ ಕುರಿತು ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಭೆ - ವಿಜಯಪುರ ನೋಡೆಲ್​ ಅಧಿಕಾರಿ

ಗ್ರಾಮೀಣ ಪ್ರದೇಶದಲ್ಲಿ ರೆಸಿಡೆನ್ಸಿಯಲ್ ಸ್ಕೂಲ್, ವಸತಿ ನಿಲಯಗಳಿಗೆ ಸಂಬಂಧಿಸಿದಂತೆ ವಾರ್ಡನ್​​, ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲೆಗಳಿಗೆ ಆಯಾ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು. ಪ್ರತಿ 2 ದಿನಕ್ಕೊಮ್ಮೆ ಆರೋಗ್ಯ ಇಲಾಖೆಯವರು ಹೆಲ್ತ್ ಸ್ಕ್ರೀನಿಂಗ್ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಜೆ.ರವಿಶಂಕರ್ ಸೂಚಿಸಿದರು.

Vijaypur District Secretariat Meeting on Quarantine
ಸಾಂಸ್ಥಿಕ ಕ್ವಾರಂಟೈನ್​ ಕುರಿತು ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಭೆ
author img

By

Published : May 11, 2020, 11:42 PM IST

ವಿಜಯಪುರ: ರಾಜ್ಯ ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ನೀಡಿರುವ ಪ್ರಮಾಣಿಕೃತ ನಿರ್ವಹಣಾ ವಿಧಾನ (ಎಸ್‍ಓಪಿ)ದಲ್ಲಿ ಸೂಚಿಸಿರುವಂತೆ ಹೊರ ರಾಜ್ಯಗಳಿಂದ ಬರುವವರಿಗೆ ಗ್ರಾಮೀಣ ಪ್ರದೇಶದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಹಾಗೂ ನಗರ ಪ್ರದೇಶದಲ್ಲಿ ಸಾಂಸ್ಥಿಕ ಮತ್ತು ಹೋಂ ಕ್ವಾರಂಟೈನ್‍ಗಳನ್ನು ಸರಿಯಾದ ರೀತಿಯಲ್ಲಿ ಯಾವುದೇ ಲೋಪದೋಷವಾಗದಂತೆ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಜೆ.ರವಿಶಂಕರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಿಸುವ ಕ್ರಮಗಳ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಆಯಾ ತಾಲೂಕು ತಹಶೀಲ್ದಾರರು, ತಾಲೂಕು ಪಂಚಾಯತ್​ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ನಗರ ಹಾಗೂ ಸ್ಥಳಿಯ ಸಂಸ್ಥೆಯ ಮುಖ್ಯಾಧಿಕಾರಿಗಳು, ಬಿಸಿಎಂ, ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚಿಸಲು ಸೂಚಿಸಿದರು.

ಗ್ರಾಮೀಣ ಪ್ರದೇಶದಲ್ಲಿ ರೆಸಿಡೆನ್ಸಿಯಲ್ ಸ್ಕೂಲ್, ವಸತಿ ನಿಲಯಗಳಿಗೆ ಸಂಬಂಧಿಸಿದಂತೆ ವಾರ್ಡನ್​​, ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲೆಗಳಿಗೆ ಆಯಾ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಬೇಕು. ಪ್ರತಿ ಎರಡು ದಿನಕ್ಕೊಮ್ಮೆ ಆರೋಗ್ಯ ಇಲಾಖೆಯವರು ಹೆಲ್ತ್ ಸ್ಕ್ರೀನಿಂಗ್ ಮಾಡಬೇಕು ಎಂದಿದ್ದಾರೆ.

ಅಲ್ಲದೆ ಶಂಕಿತ ವ್ಯಕ್ತಿಗಳನ್ನು ತಾಲೂಕಿನ ಐಸೋಲೇಷನ್ ವಾರ್ಡ್​ಗೆ ಸ್ಥಳಾಂತರಿಸಬೇಕು. ಹೋಂ ಕ್ವಾರಂಟೈನ್ ಮಾಡಲಾದ ವ್ಯಕ್ತಿಯ ಮನೆಗೆ ನೋಟಿಸ್ ಅಂಟಿಸಬೇಕು. ನೆರೆಹೊರೆಯ ಮನೆಯವರಿಗೆ ಕಣ್ಗಾವಲು ಇರುವಂತೆ ಸೂಚಿಸಬೇಕು ಎಂದಿದ್ದಾರೆ.

ಬೇರೆ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರಿಗೆ ಹಾಗೂ ಜಿಲ್ಲೆಯಿಂದ ಹೊರ ರಾಜ್ಯಕ್ಕೆ ಪ್ರಯಾಣ ಬೆಳೆಸುವವರು ಸರ್ಕಾರದಿಂದ ಸೇವಾ ಸಿಂಧು, ಅಂತರ್ ಜಿಲ್ಲೆಗಳ ಸಂಚಾರಕ್ಕಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅಭಿವೃದ್ಧಿಪಡಿಸಿರುವ ಜಾಲತಾಣದ ಮೂಲಕ ಆನ್‍ಲೈನ್‍ನಲ್ಲಿ ಪಾಸ್ ಪಡೆದುಕೊಳ್ಳಬಹುದಾಗಿದೆ. ಜಿಲ್ಲೆಗೆ ಆಗಮಿಸುವವರಿಗೆ ಮತ್ತು ಪ್ರಯಾಣ ಬೆಳೆಸುವವರಿಗೆ ಸಮನ್ವಯತೆ ಮತ್ತು ಸಹಕಾರ ನೀಡಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.