ವಿಜಯಪುರ: ಮೈದುಂಬಿ ನಿಂತಿರುವ ಭೂತನಾಳ ಕೆರೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಾಗಿನ ಅರ್ಪಿಸಿದರು.
ವರ್ಷಧಾರೆ ಉತ್ತಮವಾಗಿ ಸುರಿದ ಪರಿಣಾಮ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆ ಸಂಪೂರ್ಣವಾಗಿ ಭರ್ತಿಯಾಗಿದೆ. 120 ಎಕರೆ ಪ್ರದೇಶದಲ್ಲಿರುವ ಕೆರೆ ವಿಜಯಪುರ ನಗರಕ್ಕೆ ಕುಡಿಯುವ ನೀರನ್ನು ಭೂತನಾಳ ಕೆರೆ ಮೂಲಕ ಒದಗಿಸಲಾಗುತ್ತದೆ. ವಿಜಯಪುರ ನಗರ ಶಾಸಕ ಯತ್ನಾಳ್ ಕೆರೆಗೆ ವಿಶೇಷ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಈ ಕೆರೆ 253 ಎಸ್‌ಸಿಎಸ್ ನೀರಿನ ಸಾಮರ್ಥ್ಯ ಹೊಂದಿದ್ದು, ವರ್ಷವಿಡೀ ವಿಜಯಪುರ ನಗರದ ಜನತೆ ಕುಡಿಯುವ ನೀರಿಗೆ ಭೂತನಾಳ ಕೆರೆಯನ್ನೇ ಅವಲಂಬಿಸಿದ್ದಾರೆ. ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ದೇವಾನಂದ್ ರ್ಚವ್ಹಾಣ್, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ಸೇರಿದಂತೆ ಸಾರ್ವಜನಿಕರು ಭಾಗಿಯಾಗಿದ್ದರು.