ETV Bharat / state

ವಿಜಯಪುರ: ಡ್ರಗ್ಸ್ ಮಾಫಿಯಾ ವಿರುದ್ಧ ಪೋಸ್ಟ್ ಕಾರ್ಡ್ ಚಳುವಳಿ - Vijaypura

ಡ್ರಗ್ಸ್ ದಂಧೆ ಮಟ್ಟ ಹಾಕಲು ಹಾಗೂ ಪೆಡ್ಲರ್‌ಗಳ ಬಂಧನಕ್ಕೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪೋಸ್ಟ್ ಕಾರ್ಡ್ ಚಳುವಳಿ ನಡೆಸಿದ್ರು‌‌‌.

Post Card Movement Against Drugs Mafia
ಡ್ರಗ್ಸ್ ಮಾಫಿಯಾ ವಿರುದ್ದ ಪೋಸ್ಟ್ ಕಾರ್ಡ್ ಚಳುವಳಿ..
author img

By

Published : Sep 26, 2020, 2:02 PM IST

ವಿಜಯಪುರ: ಡ್ರಗ್ಸ್ ಮಾಫಿಯಾ ಮಟ್ಟ ಹಾಕಲು ವಿಶೇಷ ಕಾನೂನು ಜಾರಿ ಮಾಡುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪತ್ರ ಚಳುವಳಿ ನಡೆಸಿದರು.

ಡ್ರಗ್ಸ್ ದಂಧೆ ಮಟ್ಟ ಹಾಕಲು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರಿಂದ ಪೋಸ್ಟ್ ಕಾರ್ಡ್ ಚಳುವಳಿ

ನಗರದ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಎಬಿವಿಪಿ ಕಾರ್ಯಕರ್ತರು ಡ್ರಗ್ಸ್ ಮಾಫಿಯಾ ವಿರುದ್ಧ ಘೋಷಣೆ ಕೂಗಿ, ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಜಾಲ ಸಮಾಜಕ್ಕೆ ಪಿಡುಗಾಗಿ ಕಾಡುತ್ತಿದೆ. ಮಾಫಿಯಾ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಡ್ರಗ್ಸ್ ಜಾಲ ಯುವ ಸಮೂಹವನ್ನ ವ್ಯಸನಕ್ಕೆ ದಾರಿ ಮಾಡುವುದಲ್ಲದೆ ವಿದ್ಯಾರ್ಥಿಗಳ ಜೀವನ ಹಾಳು ಮಾಡುತ್ತಿದೆ ಎಂದು ಎಬಿವಿಪಿ ಕಾರ್ಯಕರ್ತರ ಕಿಡಿಕಾರಿದರು. ಕಳ್ಳ ಮಾರ್ಗದ ಮೂಲಕ ರಾಜ್ಯಕ್ಕೆ ಡ್ರಗ್ಸ್, ಗಾಂಜಾ ಸೇರಿದಂತೆ ಮಾದಕ ವಸ್ತುಗಳು ಬರುತ್ತಿದ್ದು, ರಾಜ್ಯ ಸರ್ಕಾರ ಕಡಿವಾಣ ಹಾಕುವಂತೆ ಆಗ್ರಹಿಸಿದ್ರು.

ಇನ್ನು ಎಬಿವಿಪಿ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಮಾರಕವಾಗಿರುವ ಡ್ರಗ್ಸ್ ದಂಧೆ ಮಟ್ಟ ಹಾಕಲು ಹಾಗೂ ಪೆಡ್ಲರ್‌ಗಳ ಬಂಧನಕ್ಕೆ ಆಗ್ರಹಿಸಿ ಸಿಎಂಗೆ ಅಂಚೆ ಮೂಲಕ ಪತ್ರ ಕಳುಹಿಸಿ ಪೋಸ್ಟ್ ಕಾರ್ಡ್ ಚಳುವಳಿ ನಡೆಸಿದ್ರು‌‌‌.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.