ವಿಜಯಪುರ: ಗುಮ್ಮಟನಗರಿ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ವಿಜಯಪುರ ವಿಕಾಸ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ ಪ್ರತಿಭಟನಾಕಾರು ಐತಿಹಾಸಿಕ ನಗರ ಅಭಿವೃದ್ಧಿ ಕೊರತೆ ಎದುರಿಸುತ್ತಿದೆ. ಕಳೆದ ಹಲವು ತಿಂಗಳಿಂದ ನಗರದ ರಸ್ತೆಗಳು ಹದಗೆಟ್ಟಿದ್ದು ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಟ ನಡೆಸುವಂತಾಗಿದೆ. ಆದ್ರೆ ಪಾಲಿಕೆ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗೆ ಚರಂಡಿ ನೀರು ಬಂದು ಸೇರುತ್ತಿದೆ. ಲಾಕ್‌ಡೌನ್ ಅವಧಿಯ ಮೊದಲು ಆರಂಭವಾದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳದೆ ನೀರು ಸಂಗ್ರವಾಗುತ್ತಿದೆ. ತಕ್ಷಣವೇ ಜಿಲ್ಲಾಡಳಿತ ರಸ್ತಗಳ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.