ETV Bharat / state

ವಿಜಯಪುರದ ಮಸಬಿನಾಳದಲ್ಲಿ ಮತಯಂತ್ರ ಪುಡಿ ಪುಡಿ; ಕೋಲಾರದಲ್ಲಿ ಪಿಎಸ್​ಐ ಜೀಪ್‌ಗೆ ಮುತ್ತಿಗೆ

author img

By

Published : May 10, 2023, 2:04 PM IST

Updated : May 10, 2023, 8:12 PM IST

ವಿಜಯಪುರ ಜಿಲ್ಲೆಯ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ.

The villagers broke the EVM  The villagers broke the EVM and VVPAT machines  broke the EVM and VVPAT machines in Vijayapura  ಮತಯಂತ್ರಗಳನ್ನು ಪುಡಿಪುಡಿ ಮಾಡಿದ ಗ್ರಾಮಸ್ಥರು  ಅರ್ಧಕ್ಕೆ ನಿಲ್ಲಿಸಿದ ಮತದಾನ  ಸಿಬ್ಬಂದಿ ಸರಿಯಾಗಿ ಉತ್ತರಿಸಿಲ್ಲ ಎಂಬ ಆರೋಪ  ವಿವಿಪ್ಯಾಟ್​ ಮಶೀನ್​ಗಳನ್ನು ಒಡೆದು ಹಾಕಿರುವ ಘಟನೆ  ಮತಯಂತ್ರಗಳನ್ನ ಒಡೆದು ಪುಡಿಪುಡಿ  ಇವಿಎಂ ಹಾಗೂ ವಿವಿಪ್ಯಾಟ್ ಮಶೀನ್‌  ಇವಿಎಂ ಹಾಗೂ ವಿವಿಪ್ಯಾಟ್ ಮಶೀನ್‌  ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತ
ಅರ್ಧಕ್ಕೆ ನಿಂತ ಮತದಾನ
ವಿಜಯಪುರದ ಮಸಬಿನಾಳದಲ್ಲಿ ಮತಯಂತ್ರ ಪುಡಿ ಪುಡಿ

ವಿಜಯಪುರ: ರೊಚ್ಚಿಗೆದ್ದ ಗ್ರಾಮಸ್ಥರು ಮತಯಂತ್ರ ಮತ್ತು ವಿವಿಪ್ಯಾಟ್ ಮಷಿನ್‌ಗಳನ್ನು ಪುಡಿಗಟ್ಟಿರುವ ಘಟನೆ ಜಿಲ್ಲೆಯ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಇಂದು ನಡೆದಿದೆ. ಇವಿಎಂ ಯಂತ್ರದಲ್ಲಿ ದೋಷ ಕಂಡುಬಂದಿದ್ದು, ಅಧಿಕಾರಿಗಳು ಮತದಾನ ಕಾರ್ಯ ಸ್ಥಗಿತಗೊಳಿಸಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ವಾಪಸ್ ಕೊಂಡೊಯ್ಯುತ್ತಿದ್ದರು. ಮೀಸಲು ಇಡಲಾಗಿದ್ದ ಮಶಿನ್‌ಗಳನ್ನೂ ತೆಗೆದುಕೊಂಡು ಹೋಗುವುದನ್ನು ಗಮನಿಸಿದ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಬ್ಬಂದಿ ಸರಿಯಾಗಿ ಉತ್ತರಿಸಲಿಲ್ಲ ಎಂದು ತಿಳಿದುಬಂದಿದೆ. ಇದರಿಂದ ಕೋಪಗೊಂಡು ಮತಯಂತ್ರಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಗ್ರಾಮಸ್ಥರು ಅಧಿಕಾರಿಗಳ ಕಾರನ್ನೂ ಜಖಂಗೊಳಿಸಿದ್ದಾರೆ. ಸಿಬ್ಬಂದಿಗೆ ಥಳಿಸಿದ್ದಾರೆ ಎಂಬ ಆರೋಪವಿದೆ. ಸುದ್ದಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದರು. ಮಸಬಿನಾಳ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ, ಎಸ್​​ಪಿ ಪ್ರತಿಕ್ರಿಯೆ

ಜಿಲ್ಲಾಧಿಕಾರಿ, ಎಸ್​​ಪಿ ಭೇಟಿ : ಪ್ರಕರಣ ಸಂಬಂಧ ಸ್ಥಳಕ್ಕೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಸಬಿನಾಳ ಗ್ರಾಮಕ್ಕೆ ಭೇಟಿ ನೀಡಿದರು. ಘಟನೆ ಬಗ್ಗೆ ಬಸವನ ಬಾಗೇವಾಡಿ ಡಿವೈಎಸ್‌ಪಿಯಿಂದ ಮಾಹಿತಿ ಕಲೆ ಹಾಕಿದರು. ಈ ಬಗ್ಗೆ ಸ್ಪಷ್ಟಿಕರಣ ನೀಡಿದ ಸೆಕ್ಟರ್ ಅಧಿಕಾರಿ, ಜನರ ತಪ್ಪು ಕಲ್ಪನೆಯಿಂದಾಗಿ ಈ ಘಟನೆ ನಡೆದಿದೆ ಎಂದು ಡಿಸಿಯವರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತು ವಿವಿಪ್ಯಾಟ್, ಇವಿಎ ಯಂತ್ರ ಒಡೆದು ಹಾಕಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಡಿಸಿ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಎಸ್ಪಿ ಆನಂದಕುಮಾರ ಈ ಕುರಿತು ಮಾಹಿತಿ ನೀಡಿದ್ದು, 'ಈಗಾಗಲೇ 20ರಿಂದ 25 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರು ಕಠಿಣ ಕ್ರಮ ಕೈಗೊಳ್ಳುತ್ತೇವೆ' ಎಂದಿದ್ದಾರೆ. ಇಂತಹ ಕೃತ್ಯದಲ್ಲಿ ಭಾಗವಹಿಸಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿಯೊಂದಿಗೆ ಆಗಮಿಸಿ ಮತದಾನ ಮಾಡಿದ ಪ್ರಿಯಾಂಕ್​ ಖರ್ಗೆ

ಕೋಲಾರದಲ್ಲಿ ಪೊಲೀಸ್​ ಜೀಪ್‌ಗೆ​ ಮುತ್ತಿಗೆ: ಕೋಲಾರ ತಾಲ್ಲೂಕಿನ ಕೂಟೇರಿ ಗ್ರಾಮದಲ್ಲಿ ಮತಗಟ್ಟೆ ಬಳಿ ಕುಳಿತಿದ್ದವರಿಗೆ ದೂರ ಹೋಗುವಂತೆ ಮಹಿಳಾ ಪಿಎಸ್​ಐ ಹೇಳಿದ್ದಾರೆ. ಪೊಲೀಸರು ಮತ್ತು ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ಶ್ರೀಕೃಷ್ಣಪ್ಪ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪೊಲೀಸರ ಮಾತು ಕೇಳದ ಹಿನ್ನೆಲೆಯಲ್ಲಿ ಶ್ರೀಕೃಷ್ಣಪ್ಪರಿಗೆ ಜೀಪ್​ ಹತ್ತುವಂತೆ ಸೂಚಿಸಿದ್ದಾರೆ. ಕೃಷ್ಣಪ್ಪ ಪೊಲೀಸ್​ ಜೀಪ್​ ಹತ್ತಲು ನಿರಾಕರಿಸಿದ್ದಾರೆ. ಬಲವಂತವಾಗಿ ಪೊಲೀಸ್ ಜೀಪು ಹತ್ತಿಸಿಕೊಳ್ಳುವಾಗ ಕೃಷ್ಣಪ್ಪರ ತಲೆಗೆ ಗಾಯವಾಗಿದೆ. ಪೊಲೀಸರ ವರ್ತನೆ ಖಂಡಿಸಿದ ಗ್ರಾಮಸ್ಥರು ತಿರುಗಿ ಬಿದ್ದಿದ್ದಾರೆ. ಗ್ರಾಮಸ್ಥರು ಪೊಲೀಸ್ ಜೀಪ್​ಗೆ ಮುತ್ತಿಗೆ ಹಾಕಿದರು. ಕೃಷ್ಣಪ್ಪರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Last Updated : May 10, 2023, 8:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.