ಮುದ್ದೇಬಿಹಾಳ(ವಿಜಯಪುರ): ತಾಲೂಕಿನ ನಾಗಬೇನಾಳ ಪಿಡಿಒ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾಗಬೇನಾಳ ಗ್ರಾಮಸ್ಥರು ತಾಲೂಕು ಪಂಚಾಯಿತಿ ಇಒ ಎಸ್.ಜಿ.ಗುರಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪಿಡಿಒ ವರ್ಗಾವಣೆಯಾಗಿದೆ ಎಂದು ತಮಗೆ ಬೇಕಾದವರಿಗೆ ಸರ್ಕಾರಿ ಜಾಗವನ್ನು ಪರಭಾರೆ ಮಾಡುತ್ತಿದ್ದಾರೆ. ಅಲ್ಲದೇ, ರೈತರಿಗೆ ಹಾಗೂ ಬಡ ಕೂಲಿಕಾರ್ಮಿಕರಿಗೆ ಪಹಣಿ ಕೊಡಲು 5 ರಿಂದ 10 ಸಾವಿರ ಲಂಚಕ್ಕೆ ಬೇಡಿಕೆ ಇಡುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ.
ತಮಗೆ ಕಂಪ್ಯೂಟರ್ ಆಪರೇಟರ್ ನೇಮಕ ಮಾಡಿಕೊಂಡು ಅವ್ಯವಹಾರ ನಡೆಸುತ್ತಿದ್ದಾರೆ. ಕೂಡಲೇ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎರಡು ದಿನಗಳಲ್ಲಿ ಪಂಚಾಯಿತಿ ಕಚೇರಿಯನ್ನು ಮುಚ್ಚಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.