ವಿಜಯಪುರ: ಮಹಿಳೆಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದು ಕೋವಿಡ್ ಭೀತಿಯ ಕಾರಣ ಸುರಕ್ಷಾ ಕಿಟ್ ಧರಿಸಿಕೊಂಡು ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಿದ ಘಟನೆ ಚಡಚಣ ತಾಲೂಕಿನ ಉಮರಜ ಗ್ರಾಮದಲ್ಲಿ ನಡೆದಿದೆ.
ಕೊರೊನಾದಿಂದಲೇ ಮಹಿಳೆ ಮೃತಪಟ್ಟಿದ್ದಾರೆಂದು ಸಂಶಯಗೊಂಡ ಸಂಬಂಧಿಕರು ಮತ್ತು ಗ್ರಾಮಸ್ಥರು ಮಹಿಳೆಯ ಅಂತಿಮ ವಿಧಿವಿಧಾನ ಪೂರೈಸಲು ಹಿಂದೇಟು ಹಾಕಿದ್ದಾರೆ. ಮಹಿಳೆ ಮೃತಪಟ್ಟು 12 ಗಂಟೆಗಳ ಬಳಿಕ ಅಂತ್ಯಸಂಸ್ಕಾರ ಮಾಡಲಾಗಿದೆ.
ಮೃತದೇಹದ ಅಂತಿಮ ಸಂಸ್ಕಾರ ನೆರವೇರಿಸಲು ಚಡಚಣದ ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳಿಗೆ ಕೇಳಿಕೊಂಡಿದ್ದಾರೆ. ಆದರೆ ಸ್ಥಳಕ್ಕೆ ಬಾರದ ಅಧಿಕಾರಿಗಳು ಎರಡು ಪಿಪಿಇ ಕಿಟ್ ಕಳುಹಿಸಿದ್ದರು. ಹೀಗಾಗಿ ಸಂಬಂಧಿಕರೇ ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆ ನೆರವೇರಿಸಿದರು.
ಇದನ್ನೂ ಓದಿ: ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಮಗ ಕೋವಿಡ್ಗೆ ಬಲಿ