ವಿಜಯಪುರ: ಆಲಮಟ್ಟಿ ಜಲಾಶಯದ ನೀರು ಜಮೀನಿಗೆ ನುಗ್ಗಿದ ಪರಿಣಾಮ ರೈತರು ಬೆಳೆದಿದ್ದ ಬೆಳೆ ನಷ್ಟವಾಗಿದೆ.
ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಿಂದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ 2.13 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರ ಪರಿಣಾಮ ಜಿಲ್ಲೆಯ ಯಲಗೂರ, ಮುದೂರ, ಕಾಳಗಿ, ಬಳಬಟ್ಟಿ, ವಡವಡಗಿ, ಯಲ್ಲಮ್ಮನ ಬೂದಿಹಾಳ, ಮಸೂತಿ, ಕಾಶಿನಕುಂಟಿ, ಯಲಗೂರ, ಅರಳದಿನ್ನಿಯ ಗ್ರಾಮಗಳ ನದಿ ಪಕ್ಕದ ಜಮೀನಿಗೆ ನಾರಾಯಣಪುರದ ಬಸವ ಸಾಗರದ ಹಿನ್ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಇದರಿಂದಾಗಿ ಜಮೀನಿನಲ್ಲಿ ಬಿತ್ತನೆ ಮಾಡಲಾಗಿದ್ದ ತೊಗರಿ, ಸಜ್ಜೆ, ಕಬ್ಬು ಬೆಳೆ ನೀರು ಪಾಲಾಗಿದೆ. ಆದ್ದರಿಂದ ಸಂಬಂಧಪಟ್ಟ ಇಲಾಖೆ ತಮಗೆ ಸೂಕ್ತ ಪರಿಹಾರ ನಿಡಬೇಕೆಂದು ರೈತರು ಆಗ್ರಹಿಸಿದ್ದಾರೆ.