ವಿಜಯಪುರ: ಆಲಮಟ್ಟಿ ಆಣೆಕಟ್ಟೆಯ ಕೆಳಭಾಗದಲ್ಲಿರುವ ಜನ-ಜಾನುವಾರುಗಳಿಗೆ ಹಾಗೂ ಕುಡಿಯುವ ನೀರಿನ ಅನುಕೂಲಕ್ಕಾಗಿ ನಾರಾಯಣಪುರ ಅಣೆಕಟ್ಟೆಗೆ ಆಲಮಟ್ಟಿ ಆಣೆಕಟ್ಟೆಯ ಕ್ರೆಸ್ಟ್ ಗೇಟ್ ಹಾಗೂ ಕೆಪಿಸಿಎಲ್ ವಿದ್ಯುದಾಗಾರದ ಮೂಲಕ 23,148 ಕ್ಯೂಸೆಕ್ ನೀರನ್ನು ಏ. 23ರವರೆಗೆ ಬಿಡಲಾಗುತ್ತಿದೆ. ಹಾಗಾಗಿ ಅಣೆಕಟ್ಟೆಯ ಕೆಳಭಾಗದಲ್ಲಿ ವಾಸಿಸುತ್ತಿರುವ ಜನ-ಜಾನುವಾರು, ಪಂಪ್‍ಸೆಟ್ ಹಾಗೂ ಆಸ್ತಿಪಾಸ್ತಿ ಸುರಕ್ಷಿತ ಸ್ಥಳಗಳಿಗೆ ಸಾಗಿಸುವಂತೆ ಕೃಷ್ಣಾ ಜಲ ಭಾಗ್ಯ ನಿಗಮದ ಕಾರ್ಯನಿರ್ವಾಹಕ ಅಭಿಯಂತರರು ಸೂಚಿಸಿದ್ದಾರೆ.
ಈ ಸಂಬಂಧ ತಹಶೀಲ್ದಾರರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಬಾಧಿತ ಗ್ರಾಮಗಳಲ್ಲಿ ಡಂಗೂರ ಸಾರಿ ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅವರು ಕೋರಿದ್ದಾರೆ.