ETV Bharat / state

ಜಿಗಜಿಣಗಿ ಅವರಿಗೆ ಟಿಕೆಟ್ ಸಿಗಲ್ಲ ಅನ್ನುವುದಕ್ಕೆ ಎಂ.ಬಿ ಪಾಟೀಲ್​ ಯಾವಾಗ ಬಿಜೆಪಿ ವಕ್ತಾರರಾದರು: ಗೋವಿಂದ ಕಾರಜೋಳ - ಈಟಿವಿ ಭಾರತ್​ ಕನ್ನಡ ನ್ಯೂಸ್

ಲೋಕಸಭಾ ಚುನಾವಣೆಯಲ್ಲಿ ರಮೇಶ ಜಿಗಜಿಣಗಿ ಅವರ ಟಿಕೆಟ್ ವಿಚಾರವಾಗಿ ಸಚಿವ ಎಂ.ಬಿ. ಪಾಟೀಲ್ ನೀಡಿದ್ದ ಹೇಳಿಕೆಗೆ ಮಾಜಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.

ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
author img

By ETV Bharat Karnataka Team

Published : Sep 3, 2023, 11:02 PM IST

ಸಚಿವ ಎಂ.ಬಿ ಪಾಟೀಲ್​ ಯಾವಾಗ ಬಿಜೆಪಿ ವಕ್ತಾರರಾದರು-ಗೋವಿಂದ ಕಾರಜೋಳ

ವಿಜಯಪುರ : ರಮೇಶ ಜಿಗಜಿಣಗಿ ಅವರಿಗೆ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎಂಬ ಸಚಿವ ಎಂ.ಬಿ. ಪಾಟೀಲ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು, ಎಂ ಬಿ ಪಾಟೀಲರು ನಮ್ಮ ಪಕ್ಷದ ವಕ್ತಾರ ಯಾವಾಗ ಆಗಿದ್ದಾರೆ? ಎಂದು ಹಾಸ್ಯ ಚಟಾಕಿ ಹಾರಿಸಿದರು.

ಭಾನುವಾರ ಮಾಧ್ಯಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ರೀತಿಯ ಊಹಾಪೋಹಗಳಿಗೆ ಕಿವಿಗೊಡಬೇಡಿ. ರಮೇಶ್​ ಜಿಗಜಿಣಗಿ ಅವರು ಹಿರಿಯ ನಾಯಕರಾಗಿದ್ದು, 40 ವರ್ಷದ ರಾಜಕಾರಣ ಮಾಡಿದ್ದಾರೆ ಎಂದರು. ಜಿಗಜಿಣಗಿ ಅವರಿಗೆ ಟಿಕೆಟ್​ ಸಿಗಲಿಲ್ಲ ಎಂದರೇ ಕಾರಜೋಳ ಅವರಿಗೆ ಟಿಕೆಟ್​ ಸಿಗಬಹುದೇ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪಕ್ಷದಲ್ಲಿ ಯಾವುದೇ ಬೆಳವಣಿಗೆ ಇಲ್ಲ. ಇದ್ದರೆ, ಮೇಲೆ ಇರುವವರು ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಬಜೆಟ್‌ನಲ್ಲಿ ನೀರಾವರಿಗೆ ಒಂದು ಪೈಸೆ ಮೀಸಲಿಟ್ಟಿಲ್ಲ : ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ, ಬಾಗಲಕೋಟೆ ಅವಳಿ ಜಿಲ್ಲೆಯ ಜನತೆಗೆ ಮೋಸ ಮಾಡಿದ್ದಾರೆ. ರಾಜಕೀಯವಾಗಿ ಪುನರ್ ಜನ್ಮ ನೀಡಿದ ಜನರ ಋಣ ತೀರಿಸುವ ಕಾರ್ಯ ಅವರು ಮಾಡಬೇಕಿತ್ತು. ಆದರೆ, ದಾರಿ ತಪ್ಪಿಸುವ, ಮೋಸ ಮಾಡುವ ಕೆಲಸ ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಕಾರಜೋಳ ತಿಳಿಸಿದರು.

ಯುಕೆಪಿ ಮೂರನೇ ಹಂತದ ಅನುಷ್ಠಾನ ಸಂಬಂಧ ಭೂಸ್ವಾಧೀನ, ಪುನರ್ವಸತಿ, ಪುನರ್ ನಿರ್ಮಾಣ ಮೊದಲು ಆಗಬೇಕು. ನಮ್ಮ ಪಾಲಿನ 130 ಟಿಎಂಸಿ ಅಡಿ ನೀರು ಸದುಪಯೋಗಕ್ಕೆ ಯೋಜನೆ ರೂಪಿಸಬೇಕಿದೆ. ಯುಕೆಪಿ ಮೂರನೇ ಹಂತಕ್ಕೆ ಈ ವರ್ಷ 10 ಸಾವಿರ ಕೋಟಿ ರೂ. ಅನುದಾನ ನೀಡಬೇಕು. 2023ರ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮುಂದಿನ ಐದು ವರ್ಷದಲ್ಲಿ 2 ಲಕ್ಷ ಕೋಟಿ ರೂ. ಅನುದಾನವನ್ನು ರಾಜ್ಯದ ನೀರಾವರಿಗೆ ಖರ್ಚು ಮಾಡುತ್ತೇವೆ ಎಂದು ಭರವಸೆ ನೀಡಿದ್ದರು.

ಆದರೆ, ಬಜೆಟ್‌ನಲ್ಲಿ ಒಂದು ಪೈಸೆ ಮೀಸಲಿಟ್ಟಿಲ್ಲ. ಬಜೆಟ್‌ನಲ್ಲಿ ನೀರಾವರಿಗೆ 5 ಸಾವಿರ ಕೋಟಿ ರೂ. ಕಡಿಮೆ ಮಾಡಿದ್ದಾರೆ. ಬಿಜೆಪಿ ಕೊನೆಯ ಬಜೆಟ್‌ನಲ್ಲಿ ಮೀಸಲಿಟ್ಟಿದ್ದ 21 ಸಾವಿರ ಕೋಟಿ ರೂ. ಅನುದಾನ ಬಳಕೆಯ ಬಗ್ಗೆಯೂ ಬಜೆಟ್‌ನಲ್ಲಿ ಅನುಮತಿ ನೀಡಿಲ್ಲ. ಯುಕೆಪಿ ಮೂರನೇ ಹಂತದ ಅನುಷ್ಠಾನ ಸಂಬಂಧ ಬಿಜೆಪಿ ಸರ್ಕಾರದ ಅವಧಿಯಲ್ಲಿ 53 ಸಾವಿರ ಎಕರೆ ಭೂಸ್ವಾಧೀನಕ್ಕೆ ನೋಟಿಫಿಕೇಶನ್ ಮಾಡಲಾಗಿತ್ತು. ಆದರೆ, ಹಾಲಿ ಕಾಂಗ್ರೆಸ್ ಸರ್ಕಾರ ಇತ್ತ ಗಮನ ಹರಿಸಿಲ್ಲ ಎಂದು ದೂರಿದರು.

ರಾಜ್ಯದ ನೀರಾವರಿ ಯೋಜನೆಗಳ ಅಡೆತಡೆ ನಿವಾರಣೆ ಸಂಬಂಧ ಪ್ರಧಾನಿ ಬಳಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಪ್ರಧಾನಿ ಬಳಿಗೆ ನಿಯೋಗ ಹೋಗುವುದರಿಂದ ಸದ್ಯಕ್ಕೆ ಯಾವುದೇ ಪ್ರಯೋಜನವಿಲ್ಲ. ಕಾರಣ ಕೋರ್ಟ್‌ನಲ್ಲಿ ಪ್ರಕರಣಗಳು ಇರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರಿಯ ಯೋಜನೆ ಎಂದು ಘೋಷಿಸಿ, ಕಳೆದ ಬಜೆಟ್‌ನಲ್ಲಿ 5300 ಕೋಟಿ ರೂ. ಮಂಜೂರು ಮಾಡಿದೆ. ಅದನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರ ಪ್ರಯತ್ನಿಸಿಲ್ಲ. ಯುಕೆಪಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿರುವ ಪ್ರಕರಣ ತೆರವಾಗಿ, ಗೆಜೆಟ್ ನೋಟಿಫಿಕೇಶನ್ ಆದ ಬಳಿಕ ನಾನೇ ಹೋಗಿ ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಿಸಿಕೊಂಡು ಬರುತ್ತೇನೆ ಎಂದರು.

ಒಕ್ಕೂಟ ಖುಷಿಗೆ ಕಾವೇರಿ ತಮಿಳುನಾಡಿಗೆ : ಇಂಡಿಯಾ ರಾಜಕೀಯ ಒಕ್ಕೂಟವನ್ನು ಖುಷಿ ಪಡಿಸಲು ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ಮೋಸದಾಟ ಬೇಡ, ಬಿಜೆಪಿ ಮೇಲೆ ಗೂಬೆ ಕೂರಿಸುವುದು ಬೇಡ. ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಆವರಿಸಿದೆ. ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗೋಶಾಲೆ, ಕುಡಿಯುವ ನೀರು, ಮೇವು, ಜನರಿಗೆ ಉದ್ಯೋಗ ಒದಗಿಸಲು ಆದ್ಯತೆ ನೀಡಬೇಕು ಎಂದು ಗೋವಿಂದ ಕಾರಜೋಳ ಆಗ್ರಹಿಸಿದರು.

ಗ್ಯಾರಂಟಿ ಹೆಸರಲ್ಲಿ ಮೋಸ ನಡೆದಿದೆ. ಗ್ಯಾರಂಟಿ ಬೇಡ ಎನ್ನುವುದಿಲ್ಲ. ರಾಜ್ಯದ ಅಭಿವೃದ್ಧಿ ಕಡೆಗಣಿಸಬೇಡಿ. 11,144 ಕೋಟಿ ರೂ. ಎಸ್‌ಸಿ, ಎಸ್‌ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಬಳಸಿಕೊಳ್ಳುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ ಸಮುದಾಯಗಳಿಗೆ ಮೋಸ ಮಾಡಿದೆ. ಎಸ್‌ಸಿ, ಎಸ್‌ಟಿ ಅನುದಾನವನ್ನು ಆ ಸಮಾಜದ ಅಭಿವೃದ್ಧಿಗೆ ಬಳಸಬೇಕು ಎಂದು ಸಲಹೆ ನೀಡಿದರು.

ಆಕಾಂಕ್ಷಿಯಲ್ಲ : ಮುಂಬರುವ ಲೋಕಸಭಾ ಚುನಾವಣೆಗೆ ನಾನು ಆಕಾಂಕ್ಷಿಯಲ್ಲ. ವಿಜಯಪುರ, ಬಾಗಲಕೋಟೆಯಲ್ಲಿ ಹಾಲಿ ಸಂಸದರಿದ್ದಾರೆ. ಅಲ್ಲದೇ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೂ ನಾನು ಆಕಾಂಕ್ಷಿ ಅಲ್ಲ. ಒಂದು ದೇಶ, ಒಂದು ಚುನಾವಣೆ ವಿಷಯ ಇಂದು, ನಿನ್ನೆಯದಲ್ಲ. 1967 ರಿಂದ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಷ್ಟ್ರದ ಹಿತದೃಷ್ಟಿಯಿಂದ ಹಾಗೂ ಖರ್ಚು, ವೆಚ್ಚ ತಗ್ಗಿಸಲು ಒಂದು ದೇಶ, ಒಂದು ಚುನಾವಣೆ ದೇಶಕ್ಕೆ ಅವಶ್ಯಕ ಎಂದರು.

ಇದನ್ನೂ ಓದಿ : ರಾಜ್ಯ ಬಿಜೆಪಿಯಲ್ಲಿ ಮತ್ತೆ ಶುರುವಾದ ಲಿಂಗಾಯತ ಅಸ್ತ್ರ: ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಎಂಎಲ್​ಸಿ ಪ್ರದೀಪ್ ಶೆಟ್ಟರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.