ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಮಂಗಳವಾರ ಬೆಳಕಿಗೆ ಬಂದ ವಿಷ ಸೇವನೆ ಪ್ರಕರಣದಲ್ಲಿ ಮಹಿಳೆ ಸಾವನ್ನಪ್ಪಿದ್ದಳು. ಆರೋಪಿ ಬಸವರಾಜ ಕಿಲಾರಹಟ್ಟಿಗೆ ಕಠಿಣ ಶಿಕ್ಷೆ ವಿಧಿಸಿ ಆಕೆಯ ಮಕ್ಕಳಿಗೆ ನ್ಯಾಯ ದೊರಕಿಸಿ ಕೊಡುವಂತೆ ಮೃತರ ಸಹೋದರ ವಿನಂತಿಸಿದ್ದಾರೆ.
ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಮಹಿಳೆಯ ಸಹೋದರ, ಎಮ್ಮೆ ಕೊಡಿಸುವ ನೆಪದಲ್ಲಿ ಪರಿಚಿತನಾಗಿದ್ದ ಬಸವರಾಜ ನನ್ನ ಸಹೋದರಿ ರೇಣುಕಾಳ ಮೇಲೆ ಬಲಾತ್ಕಾರ ಮಾಡಿ ಬಲವಂತವಾಗಿ ವಿಷ ಕುಡಿಸಿ ಕಲ್ಲಿನಿಂದ ಹೊಡೆದು ಸಾಯಿಸಿದ್ದಾನೆ. ಆತನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ಮೂಲಕ ಆಕೆಯ ಮಕ್ಕಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಪ್ರಿಯತಮನ ತೊಡೆ ಮೇಲೆ ನರಳಿ ನರಳಿ ಪ್ರಾಣ ಬಿಟ್ಟ ಪ್ರಿಯತಮೆ..ಆತನ ಸ್ಥಿತಿಯೂ ಗಂಭೀರ