ETV Bharat / state

ವಿಜಯಪುರ: ಮನೆಯಲ್ಲಿದ್ದ ಒಂಟಿ ಮಹಿಳೆ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ, ದರೋಡೆ - ETv Bharat Karnataka

ಮಹಿಳೆಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

single woman house was broken into and stolen
ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಳ್ಳತನ
author img

By

Published : Dec 20, 2022, 7:42 PM IST

ವಿಜಯಪುರ : ಒಂಟಿ ಮಹಿಳೆಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ ಕಳ್ಳತನ ಮಾಡಿರುವ ಘಟನೆ ನಗರದ ಅಕ್ಕಿ ಕಾಲೋನಿಯಲ್ಲಿ ನಡೆದಿದೆ. ಹಲ್ಲೆಗೊಳಾದವರನ್ನು ನಿರ್ಮಲಾ ಸಪ್ಪಡ್ಲಿ ಎಂದು ಗುರುತಿಸಲಾಗಿದೆ.‌

ಮಹಿಳೆ ಮೇಲೆ ಹಲ್ಲೆ ಮಾಡಿದ ನಂತರ ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣ ಹಾಗೂ 25ಸಾವಿರ ನಗದು ಸೇರಿದಂತೆ ಇತರೆ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಘಟನೆಯಲ್ಲಿ ದುರ್ಷ್ಕಮಿಗಳು ಮಹಿಳೆ ತಲೆಗೆ ಕಬ್ಬಿಣದ ರಾಡ್​ನಿಂದ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ ನಿರ್ಮಲಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆದರ್ಶನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಾಸಕ ರಿಜ್ವಾನ್ ಬೆಂಬಲಿಗರು ಮನೆಗೆ ನುಗ್ಗಿ ದೌರ್ಜನ್ಯ ಎಸಗಿದ್ದಾರೆ.. ಮಹಿಳೆ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.