ವಿಜಯಪುರ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯದ ಏಕೈಕ ಮಹಿಳಾ ವಿವಿ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ಮಹಿಳಾ ಸಾಂಸ್ಕೃತಿಕ ಹಬ್ಬ-2021ಅನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ದೀಪಾ ರಾಠೋಡ್ ನೇತೃತ್ವದಲ್ಲಿ ನಡೆದ ಲಂಬಾಣಿ ನೃತ್ಯ ಎಲ್ಲರ ಗಮನ ಸೆಳೆಯಿತು. ಜೊತೆಗೆ ವಿವಿಧ ವಿಭಾಗದ ವಿದ್ಯಾರ್ಥಿನಿಯರ ನೃತ್ಯ ಸೇರಿದಂತೆ ವಿವಿಧ ನೃತ್ಯಗಳನ್ನು ಪ್ರದರ್ಶಿಸಿದರು.
ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಆಹಾರ ಮೇಳದಲ್ಲಿ ವಿದ್ಯಾರ್ಥಿನಿಯರು ತರಹೇವಾರಿ ಅಡುಗೆ ತಯಾರಿಸಿ, ಮಾರಾಟ ಮಾಡಿದರು. ಪಾನಿಪುರಿ, ಚಾಟ್ ಮಸಾಲಾ, ಗೋಬಿ ಮಂಚೂರಿ, ವಡಾ ಪಾವ್, ಸುರಖುಂಬಾ, ಡೋಕಲಾ ಖಾದ್ಯಗಳನ್ನು ಸವಿದರು. ಆಹಾರ ಮೇಳ ವೀಕ್ಷಿಸಲು ಬಂದಿದ್ದ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರು, ಅವರ ಪೋಷಕರು ಸಂತಸ ವ್ಯಕ್ತಪಡಿಸಿದರು.
ಓದಿ: ರಾಯಚೂರು : ಬೇಸಿಗೆ ಆರಂಭದಲ್ಲೇ ವಿದ್ಯುತ್ ಉತ್ಪಾದನೆಗೆ ಹೆಚ್ಚಿದ ಡಿಮ್ಯಾಂಡ್
ಇದರ ಜೊತೆಗೆ ಪಕ್ಕದ ಮಳಿಗೆಗಳಲ್ಲಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆ ಆಯೋಜಿಸಲಾಗಿತ್ತು. ತಾವೇ ತಯಾರಿಸಿದ ಕಸೂತಿ ಹಾಗೂ ಹೋಲ್ ಸೇಲ್ ದರದಲ್ಲಿ ಖರೀದಿಸಿದ್ದ ಚೂಡಿದಾರ್, ಲೆಗ್ಗಿನ್ ಟಾಪ್ ಹಾಗೂ ಸೀರೆಗಳನ್ನು ಮಾರಾಟ ಮಾಡಿ, ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆ ವ್ಯಾಪಾರ ಕೌಶಲ್ಯಗಳನ್ನು ಮನದಟ್ಟು ಮಾಡಿಕೊಂಡರು. ಈ ಮೂಲಕ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.