ವಿಜಯಪುರ: ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ಸಮಾನ ವೇತನ ನೀಡಿ, ಖಾಯಂಗೊಳಿಸುವಂತೆ ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಕೊರೊನಾ ಆರಂಭದ ದಿನಗಳಿಂದ ಜಿಲ್ಲೆಯಲ್ಲಿನ 80ಕ್ಕೂ ಅಧಿಕ ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಜೀವದ ಹಂಗು ತೊರೆದು ರಜೆ ಪಡೆಯದೆ, ಕಂಟೇನ್ಮೆಂಟ್ ಝೋನ್ ಸೇರಿದಂತೆ ವಿವಿಧೆಡೆ ಕಾರ್ಯ ನಿರ್ವಹಿಸಿದ್ದಾರೆ. ಆದರೆ, ನಮಗೆ ವೇತನ ಕಡಿಮೆಯಿದ್ದು, ಸರ್ಕಾರದ ಯಾವುದೇ ಸೌಲಭ್ಯಗಳೂ ದೊರೆಯುತ್ತಿಲ್ಲ.
ಈ ಬಗ್ಗೆ ಎಷ್ಟೇ ಹೋರಾಟ ಮಾಡಿದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ ಎಂದು ಜಿಲ್ಲಾಧಿಕಾರಿ ಬಳಿ ಅಳಲು ತೊಡಿಕೊಂಡರು.