ETV Bharat / state

ನನಗೆ ಯಾವ ಬುಲಾವೂ​ ಬಂದಿಲ್ಲ, ಬೇರೆ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ: ಯತ್ನಾಳ್​ ಸ್ಪಷ್ಟನೆ - ಬಿಜೆಪಿ ಹೈಕಮಾಂಡ್ ದೆಹಲಿಗೆ

ತಮ್ಮ ಫೇಸ್​​ಬುಕ್ ಅಧಿಕೃತ ಅಕೌಂಟ್​​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಭಾನುವಾರ ರಾತ್ರಿ ಸಿದ್ಧೇಶ್ವರ ಸಂಸ್ಥೆಯ ಅಡಿ‌ ನಿರ್ಮಿಸಲಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಶಿಶು‌ ನಿಕೇತನ ಶಾಲೆಯ ಸಿಬಿಎಸ್ಸಿ ನೋಂದಣಿ ಗಾಗಿ ದೆಹಲಿಗೆ ಹೋಗಿದ್ದೇನೆ. ನನಗೆ ಪಕ್ಷದ ಹೈಕಮಾಂಡ್ ಯಾವುದೇ ರೀತಿಯ ತುರ್ತು ಬುಲಾವ್ ಆಗಲಿ ಅಥವಾ ಸಮಯ ಕೊಟ್ಟು ವಿಚಾರಣೆಗೆ ಕರೆದಿಲ್ಲ ಎಂದು ತಮ್ಮ ಫೇಸ್​ಬುಕ್​ನಲ್ಲಿ ಬರೆದು ಕೊಂಡಿದ್ದಾರೆ.

Yatnal reaction on delhi visit
ನನಗೆ ಯಾವ ಬುಲಾವ್​ ಬಂದಿಲ್ಲ, ಬೇರೆ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ
author img

By

Published : Feb 23, 2021, 2:35 PM IST

ವಿಜಯಪುರ: ತಮ್ಮನ್ನು ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಯಿಸಿಕೊಂಡಿದ್ದಾರೆ ಎಂದು ಕೆಲವರು ಸುದ್ದಿ ಹರಡಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ತಾವು ದೆಹಲಿಗೆ ಹೋಗಿದ್ದು, ತಮ್ಮ ಶಾಲೆ ವಿಚಾರವಾಗಿ ಎಂದು ಶಾಸಕ ಯತ್ನಾಳ್​ ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಫೇಸ್ ಬುಕ್ ಅಧಿಕೃತ ಅಕೌಂಟ್​​​​​​​ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಭಾನುವಾರ ರಾತ್ರಿ ಸಿದ್ಧೇಶ್ವರ ಸಂಸ್ಥೆಯ ಅಡಿ‌ ನಿರ್ಮಿಸಲಾದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಶಿಶು‌ ನಿಕೇತನ ಶಾಲೆಯ ಸಿಬಿಎಸ್ಸಿ ನೋಂದಣಿಗಾಗಿ ದೆಹಲಿಗೆ ಹೋಗಿದ್ದೇನೆ. ನನಗೆ ಪಕ್ಷದ ಹೈಕಮಾಂಡ್ ಯಾವುದೇ ರೀತಿಯ ತುರ್ತು ಬುಲಾವ್ ಆಗಲಿ ಅಥವಾ ಸಮಯ ಕೊಟ್ಟು ವಿಚಾರಣೆಗೆ ಕರೆದಿಲ್ಲ ಎಂದು ತಮ್ಮ ಫೇಸ್​ಬುಕ್​ನಲ್ಲಿ ಬರೆದು ಕೊಂಡಿದ್ದಾರೆ.

ಯತ್ನಾಳ್​ ಎಫ್​ಬಿ ಪೋಸ್ಟ್​
ಯತ್ನಾಳ್​ ಎಫ್​ಬಿ ಪೋಸ್ಟ್​

ನನ್ನ ಹೋರಾಟ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಸಂಕಲ್ಪದ ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ಮುಕ್ತ ಭಾರತದ ಭಾಗವಾಗಿದೆ ಹೊರತು ವೈಯಕ್ತಿಕ ವ್ಯಕ್ತಿ ವಿರುದ್ಧ ಅಲ್ಲ. ನನ್ನ ಮಾತು ಪಕ್ಷದ ವಿರುದ್ಧ ಅಲ್ಲವೇ ಅಲ್ಲ. ನಿನ್ನೆ ಕರ್ನಾಟಕ ರಾಜ್ಯದ ಇಬ್ಬರು ಸಚಿವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ನನ್ನ ಬಗ್ಗೆ ಮತ್ತು ನಮ್ಮ ಪೂಜ್ಯರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ ಅದಕ್ಕೆ ಸೂಕ್ತ ಉತ್ತರ ಬಂದ ಮೇಲೆ ಕೊಡುತ್ತೇನೆ. ಹಿಂದೂ ಸಮಾಜದಲ್ಲಿಯ ಸಾಮಾಜಿಕ ನ್ಯಾಯಕ್ಕಾಗಿ ನನ್ನ ಹೋರಾಟ ನಿಲ್ಲುವುದಿಲ್ಲ ಅಂಜುವುದಿಲ್ಲ, ಬಗ್ಗುವುದೂ ಇಲ್ಲ ಮತ್ತು ಪಲಾಯನ ಇಲ್ಲವೇ ಇಲ್ಲ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.