ETV Bharat / state

ತಲೆಯ ಮೇಲೆ ಕಲ್ಲು ಹಾಕಿ ಯುವತಿಯ ಬರ್ಬರ ಕೊಲೆ... ವಿಜಯಪುರ ಬಳಿ ಭಯಾನಕ ಕೃತ್ಯ

ಅಪರಿಚಿತ ಯುವತಿಯ ಕೊಲೆ ಪ್ರಕರಣ ವಿಜಯಪುರ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ. ಯುವತಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ, ನಂತರ ಗುರುತು ಸಿಗದಂತೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ ದುಷ್ಕರ್ಮಿಗಳು.

ಯುವತಿಯ ಬರ್ಬರ ಹತ್ಯೆ
author img

By

Published : May 10, 2019, 12:20 PM IST

ವಿಜಯಪುರ: ತಾಲೂಕಿನ ಹಿಟ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸೇತುವೆ ಕೆಳಗೆ ಭೀಕರವಾಗಿ ಕೊಲೆಯಾದ ಸ್ಥಿತಿಯಲ್ಲಿ ಅಪರಿಚಿತ ಯುವತಿವೋರ್ವಳ ಶವ ಪತ್ತೆಯಾಗಿದೆ.

ಸುಮಾರು 25 ರಿಂದ 28 ವರ್ಷ ವಯಸ್ಸಿನ ಈ ಯುವತಿ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ನಂತರ ಆಕೆಯ ಗುರುತು ಸಿಗದಂತೆ ದುಷ್ಕರ್ಮಿಗಳು ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಭೀಕರ ಕೊಲೆಯಿಂದ ಜಿಲ್ಲೆಯ ಜನರು ಬೆಚ್ಚಿಬಿದ್ದಿದ್ದಾರೆ.

ಸ್ಥಳಕ್ಕೆ ವಿಜಯಪುರ ‌ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಯುವತಿಯ ಗುರುತು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Intro:ವಿಜಯಪುರ Body:ವಿಜಯಪುರ:
ಬೀಕರವಾಗಿ ಕೊಲೆಯಾದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾದ ಘಟನೆ
ವಿಜಯಪುರ ತಾಲೂಕಿನ ಹಿಟ್ನಳ್ಳಿ ಬಳಿಯ ಎನ್ಎಚ್50 ರಲ್ಲಿ ಸೇತುವೆ ಕೆಳಗೆ ನಡೆದಿದೆ.
ಸುಮಾರು 25ರಿಂದ 28 ವರ್ಅಷದ ಅಪರಿಚಿತ ಯುವತಿಯನ್ಕು ಕುತ್ತಿಗೆ ಹಗ್ಗ ಬಿಗಿದು ಕೊಲೆ ಮಾಡಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುರ್ಷ್ಕಮಿಗಳು ಕೊಲೆ ಮಾಡಿ ಬಿಸಾಕಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳಕ್ಕೆ ವಿಜಯಪುರ ‌ಗ್ರಾಮೀಣ ಪೊಲೀಸರತು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯುವತಿಯ ಗುರುತು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ದಾಖಲಾಗಿದೆ.Conclusion:ವಿಜಯಪುರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.