ವಿಜಯಪುರ: ಕೃಷಿ ಹೊಂಡದಲ್ಲಿ ಸ್ನಾನ ಮಾಡಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಹೆಬ್ಬಾಳ ಸಮೀಪದ ಜಮೀನಿನಲ್ಲಿ ನಡೆದಿದೆ.
ಹೆಬ್ಬಾಳ ಗ್ರಾಮದ ಮುದಕಪ್ಪ ಹನಮಂತಪ್ಪ ತಳವಾರ (25) ಮೃತ ಯುವಕ. ಈತ ಕೃಷಿ ಹೊಂಡದಲ್ಲಿ ಸ್ನಾನ ಮಾಡಲೆಂದು ತೆರಳಿದ್ದನು. ಈ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ನಿಡಗುಂದಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.