ETV Bharat / state

ಯಾದಗಿರಿಯಲ್ಲಿ ಮತ್ತೆ 102 ಕೋವಿಡ್ ಪ್ರಕರಣಗಳು ಪತ್ತೆ

ಯಾದಗಿರಿಯಲ್ಲಿ ಮಂಗಳವಾರ 102 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರ ಜೊತೆಗೆ 82 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Yadgiri
Yadgiri
author img

By

Published : Aug 12, 2020, 10:29 AM IST

ಯಾದಗಿರಿ: ಮಂಗಳವಾರ ಹೊಸದಾಗಿ 102 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3231ಕ್ಕೆ ಏರಿಕೆಯಾಗಿದೆ.

ವರದಿಯಾದ 102 ಪ್ರಕರಣಗಳಲ್ಲಿ 41 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶದವರು, 19 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 42 ಪ್ರಕರಣಗಳು ಸುರಪುರ ನಗರ ಹಾಗೂ ಗ್ರಾಮೀಣ ಪ್ರದೇಶದವರಾಗಿದ್ದಾರೆ.

82 ಮಂದಿ ಗುಣಮುಖ:

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 82 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ಇದುವರೆಗೆ 2216 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟಾರೆ 998 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೊರೊನಾ ಸೋಂಕಿನಿಂದ ಒಟ್ಟಾರೆ ಜಿಲ್ಲೆಯಲ್ಲಿ 17 ಜನರು ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.