ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 103 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಇಂದು ಪತ್ತೆಯಾಗಿರುವ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಸೋಂಕಿರತ ಸಂಖ್ಯೆ 6539 ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 162 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದೂವರೆಗೆ 5275 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1218 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.