ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 107 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4013ಕ್ಕೆ ಏರಿಕೆಯಾಗಿದೆ. 3 ಮಂದಿ ಸೋಂಕಿಗೆ ತುತ್ತಾಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಇಂದು ವರದಿಯಾದ 107 ಪ್ರಕರಣಗಳಲ್ಲಿ 38 ಜನರು ಯಾದಗರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 39 ಜನರು ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 30 ಪ್ರಕರಣಗಳು ಸುರಪುರದ ನಗರ ಮತ್ತು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಇನ್ನೂ 3 ಜನರು ಮೃತಪಡುವ ಮೂಲಕ ಸಾವಿನ ಸಂಖ್ಯೆ 26ಕ್ಕೆ ತಲುಪಿದೆ.
ಕೋವಿಡ್ ನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 79 ಜನರು ಸಂಪೂರ್ಣ ಗುಣಮುಖರಾಗಿದ್ದಾರೆ. ಒಟ್ಟಾರೆ ಈವರೆಗೆ 2732 ಮಂದಿ ಕೊರೊನಾ ಜಯಿಸಿ ಮನೆಗೆ ಮರಳಿದ್ದಾರೆ. ಸದ್ಯ 1255 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.