ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 128 ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,862 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 38 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಇಲ್ಲಿಯವರೆಗೆ 7,772 ಮಂದಿ ಗುಣಮುಖರಾಗಿದ್ದಾರೆ. ಇಂದು ಮಹಾಮಾರಿ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದು ಇದುವರೆಗೆ ಜಿಲ್ಲೆಯಲ್ಲಿ 54 ಜನರು ಮೃತಪಟ್ಟಿರುತ್ತಾರೆ.
ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 1,036 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.