ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 138 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ ಇದೀಗ 5,986ಕ್ಕೆ ಏರಿಕೆಯಾಗಿದೆ.
ಇಂದು ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 55, ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದಲ್ಲಿ 36, ಸುರಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 47 ಜನರಿಗೆ ಕೊರೊನಾ ಸೋಂಕು ತಗುಲಿದೆ.
ಜಿಲ್ಲೆಯಲ್ಲಿಂದು 335 ಜನರು ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 4,638 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 41 ಜನರು ಮೃತಪಟ್ಟಿದ್ದಾರೆ. ಇನ್ನೂ 1,307 ಮಂದಿ ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.