ಯಾದಗಿರಿ: ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 139 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 9,263 ಮಂದಿ ಗುಣಮುಖರಾಗಿದ್ದಾರೆ.
ಇಂದು ಹೊಸದಾಗಿ ಜಿಲ್ಲೆಯಲ್ಲಿ ಕೇವಲ 15 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 9,768 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 445 ಮಂದಿ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗುತ್ತಿದೆ.
ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 60 ಜನ ಮೃತಪಟ್ಟಿರುತ್ತಾರೆ.