ಯಾದಗಿರಿ : ಜಿಲ್ಲೆಯಲ್ಲಿಂದು ಹೊಸದಾಗಿ 143 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಇದೀಗ 7,505 ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 75 ಜನ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೆ 6,354 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಒಟ್ಟು 49 ಜನ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 1,102 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.