ಯಾದಗಿರಿ: ಕೃಷ್ಣಾ ನದಿಗೆ 2 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದರಿಂದ ಜಿಲ್ಲೆಯ 40 ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಾಗಿದೆ. ರಾಯಚೂರು ಮತ್ತು ಯಾದಗಿರಿ ಸಂಪರ್ಕ ಕಲ್ಪಿಸುವ ಕೋಳುರು ಬ್ರಿಡ್ಜ್ ಸಹ ಮುಳುಗಡೆ ಹಂತ ತಲುಪಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಜಲಾಶಯದ ಅಧಿಕಾರಿಗಾಳು 12 ಗಂಟೆಯ ವೇಳೆಗೆ 2 ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುವ ಮಾಹಿತಿ ನೀಡಿದ್ದರು. ಹೀಗಾಗಿ ಯಾದಗಿರಿ ಜಿಲ್ಲೆಯ 40ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಅಷ್ಟೇ ಅಲ್ಲದೆ ನದಿ ಪಕ್ಕದ ಹೊಲದಲ್ಲಿನ ಪಂಪ್ ಸೆಟ್, ಪೈಪ್ ಸೇರಿದಂತೆ ಕೃಷಿ ಉಪಕರಣಗಳನ್ನು ರೈತರು ಸ್ಥಳಾಂತರ ಮಾಡುತ್ತಿದ್ದಾರೆ.
ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ನೋಡಲ್ ಆಫೀಸರ್ಗಳನ್ನು ನೇಮಕ ಮಾಡಿದೆ.