ಯಾದಗಿರಿ: ಜಿಲ್ಲೆಯಲ್ಲಿಂದು 255 ಜನರಿಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,377 ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ ವಲಸಿಗರಲ್ಲೆ ಅತಿ ಹೆಚ್ಚು ಕಾಣಿಸಿಕೊಂಡಿದ್ದ ಸೋಂಕು, ಈಗ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ SAARI ಮತ್ತು ILI ಸೋಂಕಿತರ ಸಂಖ್ಯೆಯಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.
ಇಂದು 32 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಪ್ರಕರಣಗಳ ಪೈಕಿ ಇಲ್ಲಿಯವರೆಗೆ 2882 ಜನ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟಾರೆ 1,465 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಇಲ್ಲಿಯವರೆಗೆ ಕೊರೊನಾ ಸೋಂಕಿನಿಂದ ಒಟ್ಟು 30 ಜನ ಮೃತಪಟ್ಟಿದ್ದಾರೆ.