ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ಗುರುವಾರ 66 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ನಿನ್ನೆ ಸುರಪುರದ ನಿಷ್ಠಿ ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾದ 28 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ನಿನ್ನೆ ಸಂಜೆ ಕೊರೊನಾದಿಂದ ಗುಣಮುಖರಾದ 28 ಜನರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇದರ ಮಧ್ಯೆ ಜಿಲ್ಲೆಯ 66 ಜನ ಸೋಂಕಿತರಲ್ಲಿ ಇಬ್ಬರು ಸೋಂಕಿತರಾದ P-6105 ಮತ್ತು P-6106 ಸುರಪುರದವರಾಗಿದ್ದಾರೆ.