ಗುರುಮಠಕಲ್: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿಂತನಹಳ್ಳಿಯಲ್ಲಿ ನಡೆದಿದೆ.
ನೀರಿನ ಟ್ಯಾಂಕರ್ನಿಂದ ನಿನ್ನೆ ನೀರು ಪೂರೈಕೆ ಮಾಡಲಾಗಿದ್ದು, ಆ ನೀರನ್ನು ಕುಡಿದ 30ಕ್ಕೂ ಹೆಚ್ಚು ಜನರು ವಾಂತಿ ಬೇಧಿಯಿಂದ ಬಳಲಿದ್ದಾರೆ ಎನ್ನಲಾಗಿದೆ.
ಇನ್ನು ಅಸ್ವಸ್ಥರನ್ನು ಕಂದಕೂರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.