ಯಾದಗಿರಿ: ಜಿಲ್ಲೆಯಲ್ಲಿ ನಿನ್ನೆ ಹೊಸದಾಗಿ 34 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,532ಕ್ಕೆ ತಲುಪಿದೆ.
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ನಿನ್ನೆ 116 ಜನ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ 8,539 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾ ಸೋಂಕಿಗೆ ನಿನ್ನೆ ಒಬ್ಬರು ಮೃತಪಟ್ಟಿದ್ದು, ಇದುವರೆಗೆ ಜಿಲ್ಲೆಯಲ್ಲಿ 59 ಜನ ಕೋವಿಡ್ಗೆ ಬಲಿಯಾಗಿದ್ದಾರೆ.
ಒಟ್ಟು 934 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.