ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 41 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,054ಕ್ಕೆ ಏರಿಕೆಯಾಗಿದೆ.
ಇಂದು ವರದಿಯಾದ 41 ಪ್ರಕರಣಗಳಲ್ಲಿ 9 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 19 ಜನ ಶಹಾಪುರ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದವರಾಗಿದ್ದಾರೆ. ಇನ್ನುಳಿದ 13 ಪ್ರಕರಣಗಳು ಸುರಪುರ ನಗರ ಮತ್ತು ಗ್ರಾಮೀಣ ಪ್ರದೇಶದವರಾಗಿದ್ದಾರೆ.
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಸೋಂಕಿತರಲ್ಲಿ ಇಂದು 65 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಗುಣಮುಖರಾದವರ ಸಂಖ್ಯೆ 2,797 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 1,231 ಸೋಂಕಿತ ಪ್ರಕರಣಗಳಿದ್ದು, ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 26 ಜನರು ಮೃತಪಟ್ಟಿದ್ದಾರೆ.