ಯಾದಗಿರಿ : ಮಹಾರಾಷ್ಟ್ರದಿಂದ ಆಗಮಿಸಿದ್ದ 44 ವಲಸೆ ಕಾರ್ಮಿಕರಿಗೆ ಇಂದು ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 285ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ ವಲಸೆ ಕಾರ್ಮಿಕರಲ್ಲೇ ಗಣನಿಯವಾಗಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಜನರ ಆತಂಕಕ್ಕೆ ಕಾರಣವಾಗಿದೆ. ಮಹಾರಾಷ್ಟ್ರದಿಂದ ಇತ್ತೀಚಿಗೆ ವಾಪಸ್ ಆದ ಇವರನ್ನೆಲ್ಲಾ ತಪಾಸಣೆ ಬಳಿಕ ಜಿಲ್ಲೆಯ ವಿವಿಧ ಕ್ವಾರೆಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಇಂದು ಸೋಂಕು ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ನಿಗದಿತ ನೂತನ ಜಿಲ್ಲಾಸ್ಪತ್ರೆಯ ಕೋವಿಡ್-19 ವಾರ್ಡ್ಗೆ ದಾಖಲಿಸಲಾಗಿದೆ.
ಜಿಲ್ಲಾಡಳಿತ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಸಾಕಷ್ಟು ಎಡವಟ್ಟು ಮಾಡಿದೆ ಎಂಬ ಆರೋಪ ಕೇಳಿ ಬರುತ್ತಿವೆ. ನಿನ್ನೆ ಕ್ವಾರೆಂಟೈನ್ ಕೇಂದ್ರಗಳಿಂದ ಬಿಡುಗಡೆಗೊಳಿಸಿದ 18 ಜನರಲ್ಲಿ ಇಂದು ಸೋಂಕು ಪತ್ತೆಯಾಗಿದೆ ಎಂಬ ಮಾಹಿತಿಯಿದೆ. ಇವರೆಲ್ಲರೂ ಹೋಮ್ ಕ್ವಾರಂಟೈನ್ನಲ್ಲಿರುವ ಬದಲು ಊರೆಲ್ಲ ಸುತ್ತಿದ್ದಾರೆ ಎಂಬ ಮಾತುಗಳಿವೆ.