ETV Bharat / state

ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ: ಮಗಳ ಮುಡಿ ಕೊಟ್ಟು ಬರುತ್ತಿದ್ದ ಒಂದೇ ಕುಟುಂಬದ 6 ಜನ ದುರ್ಮರಣ

ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ 6 ಜನ ಮೃತಪಟ್ಟಿದ್ದಾರೆ. ಮಗಳ ಜವಳ ಕಾರ್ಯಕ್ರಮ ಮುಗಿಸಿ ಬರುವಾಗ ದುರಂತ ಸಂಭವಿಸಿದೆ.

ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ
ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ
author img

By

Published : Aug 5, 2022, 7:44 AM IST

Updated : Aug 5, 2022, 9:08 AM IST

ಯಾದಗಿರಿ/ಕಲಬುರಗಿ : ಜವಳ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಮರಳುವಾಗ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ತಡರಾತ್ರಿ ನಡೆದ ಕಾರು - ಲಾರಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಮೃತಪಟ್ಟಿದ್ದಾರೆ.

ಮಹ್ಮದ್ ವಾಜೀದ್ ಹುಸೇನ್(39), ಮಹ್ಮದ್ ಮಜರ್ ಹುಸೇನ್(79), ನೂರ್ ಜಹಾನ್ ಬೇಗಂ(70), ಹೀನಾ ಬೇಗಂ(30), ಇಮ್ರಾನ್(22) ಮತ್ತು ಉಮೇಜಾ (6ತಿಂಗಳು) ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಬಾಲಕ ಮಹ್ಮದ್ ಪಾಜೀಲ್ ಹುಸೇನ್​ನನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರೆಲ್ಲರೂ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ.

ಕಾರು ಮತ್ತು ಲಾರಿ ಮಧ್ಯೆ ಡಿಕ್ಕಿ

ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾದಲ್ಲಿ ಮಗಳ ಜವಳ ಕಾರ್ಯಕ್ರಮ ಮಾಡಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುವಾಗ ದುರಂತ ಸಂಭವಿಸಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ, ಪಿಐ ದೌವಲತ್ ಕುರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: ಬಸ್ ಬಾಗಿಲ ಬಳಿ ನಿಂತು ಪ್ರಯಾಣ: ಆಯತಪ್ಪಿ ಬಿದ್ದು ಮಹಿಳೆ ಸಾವು

Last Updated : Aug 5, 2022, 9:08 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.