ಯಾದಗಿರಿ: ಜಿಲ್ಲೆಯಲ್ಲಿಂದು ಹೊಸದಾಗಿ 66 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 5,107ಕ್ಕೆ ಏರಿಕೆಯಾಗಿದ್ದು, ಇಂದು ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ.
ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 27 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದುವರೆಗೆ 3,438 ಮಂದಿ ಗುಣಮುಖರಾಗಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ 38 ಜನರು ಮೃತಪಟ್ಟಿರುತ್ತಾರೆ. ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,631 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ವರದಿಯಾದ 66 ಪ್ರಕರಣಗಳಲ್ಲಿ 20 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 27 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. 16 ಸುರಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದವರು ಹಾಗೂ ಇನ್ನುಳಿದ 3 ಪ್ರಕರಣಗಳು ಇತರೆ ಜಿಲ್ಲೆಯವರಾಗಿದ್ದಾರೆ