ETV Bharat / state

ಯಾದಗಿರಿಗೆ ಕಂಟಕವಾದ 'ಮಹಾ' ನಂಜು: ಇಂದು 66 ಕಾರ್ಮಿಕರಿಗೆ ಕೊರೊನಾ ದೃಢ - yadagiri news

ಮಹಾರಾಷ್ಟ್ರದಿಂದ ಯಾದಗಿರಿ ಜಿಲ್ಲೆಗೆ ಆಗಮಿಸಿದ್ದ 66 ವಲಸೆ ಕಾರ್ಮಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 581ಕ್ಕೆ ಏರಿಕೆಯಾಗಿದೆ.

Coronation Positive for 66 Migrant Workers in Yadgir
ಮಹಾರಾಷ್ಟ್ರ ನಂಜು: ಯಾದಗಿರಿಯಲ್ಲಿ 66 ವಲಸೆ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್​
author img

By

Published : Jun 8, 2020, 6:58 PM IST

Updated : Jun 8, 2020, 7:24 PM IST

ಯಾದಗಿರಿ: ಜಿಲ್ಲೆಯಲ್ಲಿ ಮಹಾರಾಷ್ಟ್ರದಿಂದ ಮರಳಿದ್ದ 66 ವಲಸೆ ಕಾರ್ಮಿಕರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 581ಕ್ಕೆ ಏರಿಕೆಯಾಗಿದೆ.

ಇತ್ತೀಚೆಗೆ ಮಹಾರಾಷ್ಟ್ರದಿಂದ ಆಗಮಿಸಿದ್ದ ಈ ವಲಸೆ ಕಾರ್ಮಿಕರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿ ನಂತರ ಅವರನ್ನ ಜಿಲ್ಲೆಯ ವಿವಿಧ ಕ್ವಾರಂಟೈನ್​ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಇಂದು ಅವರ ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ. 66 ಜನರನ್ನ ಚಿಕಿತ್ಸೆಗಾಗಿ ನಿಗದಿತ ಜಿಲ್ಲಾಸ್ಪತ್ರೆಯ ಕೋವಿಡ್-19 ವಾರ್ಡ್​ಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಇವರೆಗೆ 93 ಜನರು ಗುಣಮುಖರಾಗಿದ್ದು, ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಿಂದ ಆಗಮಿಸಿರುವ ಎಲ್ಲರಿಗೂ ಕೊರೊನಾ ಪಾಸಿಟಿವ್​ ಬಂದಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

Last Updated : Jun 8, 2020, 7:24 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.