ETV Bharat / state

ಯಾದಗಿರಿಗೆ ತಪ್ಪುತ್ತಿಲ್ಲ 'ಮಹಾ' ಕಂಟಕ: 11 ಮಕ್ಕಳು ಸೇರಿ ಇಂದು 66 ಜನರಲ್ಲಿ ಸೋಂಕು ದೃಢ!

ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಕೊರೊನಾ ಹೆಲ್ತ್ ಬುಲೆಟಿನ್ ನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಒಂದರಿಂದ 15 ವರ್ಷದ 11 ಮಕ್ಕಳು ಸೇರಿದಂತೆ ಒಟ್ಟು 66 ವಲಸಿಗರಲ್ಲಿ ಸೋಂಕು ಪತ್ತೆಯಾಗಿದೆ.

Corona case's of yadagiri
Corona case's of yadagiri
author img

By

Published : Jun 11, 2020, 8:01 PM IST

ಯಾದಗಿರಿ: ಮಹಾರಾಷ್ಟ್ರದಿಂದ ಆಗಮಿಸಿದ 66 ವಲಸಿಗರಲ್ಲಿ ಕೊರೊನಾ ಸೋಂಕು ಧೃಡಪಟ್ಟಿದ್ದು, ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 735ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ಒಂದರಿಂದ ಹದಿನೈದು ವರ್ಷದ 11 ಮಕ್ಕಳು ಸೇರಿದಂತೆ ಒಟ್ಟು 66 ವಲಸಿಗರಲ್ಲಿ ಸೋಂಕು ಪತ್ತೆಯಾಗಿದೆ.

ಇತ್ತೀಚೆಗೆ ಜಿಲ್ಲೆಗೆ ವಾಪಸ್ ಆದ ಇವರನ್ನೆಲ್ಲಾ ಜಿಲ್ಲೆಯ ವಿವಿಧ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ ಮುಗಿದ ಕೆಲವರನ್ನು ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಇಂದು ಇವರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರನ್ನು ಚಿಕಿತ್ಸೆಗಾಗಿ ನಿಗದಿತ ಕೋವಿಡ್-19 ವಾರ್ಡ್ ಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರದ ಕೊರೊನಾ ನಂಜು ಮಾತ್ರ ಬೆಂಬಿಡದೆ ಕಾಡುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮುಂದುವರಿದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.