ಯಾದಗಿರಿ: ಜಿಲ್ಲೆಯಲ್ಲಿಂದು ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ 135 ಜನರು ಸಂಪೂರ್ಣ ಗುಣಮುಖರಾಗಿದ್ದು, ಒಟ್ಟಾರೆ ಇದುವರೆಗೆ 2,635 ಮಂದಿ ಗುಣಮುಖರಾಗಿದ್ದಾರೆ. ಇಂದು ಹೊಸದಾಗಿ 69 ಕೋವಿಡ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 3,906ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಒಟ್ಟಾರೆ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ 1,230 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಸೋಂಕಿನಿಂದ ಒಟ್ಟಾರೆ ಜಿಲ್ಲೆಯಲ್ಲಿ 23 ಜನರು ಮೃತಪಟ್ಟಿದ್ದಾರೆ.
ಇಂದು ವರದಿಯಾದ 69 ಪ್ರಕರಣಗಳಲ್ಲಿ 34 ಜನ ಯಾದಗಿರಿ ನಗರ ಮತ್ತು ಗ್ರಾಮೀಣ ಪ್ರದೇಶವರು, 29 ಜನ ಶಹಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಭಾಗದವರು. ಇನ್ನುಳಿದ 6 ಪ್ರಕರಣಗಳು ಸುರಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶದವರಾಗಿದ್ದಾರೆ.