ಗುರುಮಠಕಲ್: ಹತ್ತಿ ಹೊಲದಲ್ಲಿ ಗಾಂಜಾ ಬೆಳೆಯುತ್ತಿರುವ ಕುರಿತ ಮಾಹಿತಿ ಪಡೆದು ದಾಳಿ ನಡೆಸಿದ ತಹಸೀಲ್ದಾರ್ ಸಂಗಮೇಶ ಜಿಡಗೆ ಹಾಗೂ ಸಿಪಿಐ ದೇವೀಂದ್ರಪ್ಪ ಧೂಳಖೇಡ್ ನೇತೃತ್ವದ ತಂಡ 7 ಕೆಜಿ ಗಾಂಜಾವನ್ನು ಮಂಗಳವಾರ ಜಪ್ತಿ ಮಾಡಿದೆ.
ತಾಲ್ಲೂಕಿನ ಎಂ.ಟಿ.ಪಲ್ಲಿ ಗ್ರಾಮದ ಕನಕಪ್ಪ (70) ಎನ್ನುವವರ ಜಮೀನಿನ ಹತ್ತಿ ಬೆಳೆಯ ಮಧ್ಯದಲ್ಲಿ ಗಾಂಜಾ ಬೆಳೆದಿರುವ ಕುರಿತು ಮಾಹಿತಿ ಸಿಗುತ್ತಿದ್ದಂತೆ ದಾಳಿ ನಡೆಸಿದ್ದು, 7 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಕಂದಾಯ ನಿರೀಕ್ಷಕ ಶುಭಾಷ್, ಅನ್ವರ್, ಗ್ರಾಮ ಲೆಕ್ಕಿಗರಾದ ವಿಜಯ್, ದಸ್ತಗಿರಿ, ವೀರಭದ್ರಪ್ಪ, ಅಂಜಪ್ಪ ಹಾಗೂ ಪೊಲೀಸ್ ಸಿಬ್ಬಂದಿ ತಂಡದಲ್ಲಿತ್ತು.