ಸುರಪುರ: ಕರ್ನಾಟಕ ಪ್ರದೇಶ ಕುರುಬರ ಸಂಘದ ಹುಣಸಗಿ ತಾಲೂಕು ಅಧ್ಯಕ್ಷ ಪರಶುರಾಮ ಚೌದ್ರಿ ತಮ್ಮ ಜನ್ಮದಿನದ ಅಂಗವಾಗಿ ಭಾರತೀಯ ಸೇನೆಗೆ 10 ಸಾವಿರ ರೂ. ನೀಡಿದ್ದಾರೆ. ಈ ಮೂಲಕ ತಮ್ಮ ಬರ್ತಡೇಯನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.
ಪರುಶರಾಮ ಚೌದ್ರಿ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು ಮತ್ತು ಗೆಳೆಯರ ಬಳಗದ ಸೇರಿ ಭಾರತೀಯ ಸೇನಾ ನಿಧಿಗೆ 10,000 ರೂ. ದೇಣಿಗೆಯನ್ನು ಹುಣಸಿಗಿ ತಹಶೀಲ್ದಾರ್ ವಿನಯಕುಮಾರ್ ಪಾಟೀಲ್ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿನಯ್ ಕುಮಾರ್ ಪಾಟೀಲ್ ಮಾತನಾಡಿ, ರೈತರು ಮತ್ತು ಯೋಧರು ನಮ್ಮ ದೇಶದ ಎರಡು ಕಣ್ಣುಗಳಿದ್ದಂತೆ. ಇವರನ್ನು ದೇಶದ ಪ್ರತಿಯೊಬ್ಬರು ಗೌರವಿಸಬೇಕು. ಆಗ ಮಾತ್ರ ದೇಶದ ಸಂಸ್ಕೃತಿಯನ್ನು ಗೌರವಿಸಿದಂತಾಗುತ್ತದೆ ಎಂದರು.