ETV Bharat / state

ದಲಿತ ಯುವಕನ ಹತ್ಯೆ, ಬಾಲಕಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ - ಸುರಪುರ ಪ್ರತಿಭಟನೆ

ದಲಿತ ಬಾಲಕಿ ಮೇಲಿನ ಹಲ್ಲೆಯನ್ನು ಖಂಡಿಸಿ ಸುರಪುರ ತಾಲೂಕು ಮಾದಿಗ ಸಮುದಾಯದ ಸಾಮೂಹಿಕ ಸಂಘಟನೆಗಳ ವೇದಿಕೆಯಿಂದ ಸುರಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

protest
ಪ್ರತಿಭಟನೆ
author img

By

Published : Aug 31, 2020, 5:08 PM IST

ಸುರಪುರ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದ ದಲಿತ ಯುವಕನ ಹತ್ಯೆ ಹಾಗೂ ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿಯಲ್ಲಿ ನಡೆದ ದಲಿತ ಬಾಲಕಿ ಮೇಲಿನ ಹಲ್ಲೆಯನ್ನು ಖಂಡಿಸಿ ಸುರಪುರ ತಾಲೂಕು ಮಾದಿಗ ಸಮುದಾಯದ ಸಾಮೂಹಿಕ ಸಂಘಟನೆಗಳ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮಾದಿಗ ಸಮುದಾಯದ ಸಾಮೂಹಿಕ ಸಂಘಟನೆಗಳ ವೇದಿಕೆಯಿಂದ ಪ್ರತಿಭಟನೆ

ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಸೇರಿದ ನೂರಾರು ಸಂಖ್ಯೆಯ ಪ್ರತಿಭಟನಾಕಾರರು ಎರಡೂ ಘಟನೆಗಳಿಗೆ ಕಾರಣರಾದವರ ಬಂಧನಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗುತ್ತ ತಹಶೀಲ್ದಾರ್​ ಕಚೇರಿಯ ವರೆಗೆ ಮೆರವಣಿಗೆ ನಡೆಸಿದರು.

ಸಾಂಕೇತಿಕ ಧರಣಿಯಲ್ಲಿ ಭಾಗವಹಿಸಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ ಮಾತನಾಡಿ, ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಮಾದಿಗ ಸಮುದಾಯದ ಯುವಕ ಅನಿಲ್ ಇಂಗಳಗಿ ಎಂಬುವವರನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಯುವಕನ ಕೊಲೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಶಿಕ್ಷೆಗೊಳಪಡಿಸಬೇಕು ಹಾಗೂ ಯುವಕನ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವ ಜೊತೆಗೆ ಹತ್ತು ಎಕರೆ ಜಮೀನು ನೀಡಬೇಕು, ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಗ್ರಾಮದಲ್ಲಿ ದಲಿತ ಸಮುದಾಯದ ಬಾಲಕಿಯ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿ ಸಾಮಾಜಿಕ ಬಹಿಷ್ಕಾರ ಹಾಕಿದವರ ಮೇಲೆ ಉಗ್ರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಸೂಗುರು ಭೀಮರಾಯ ಕಡಿಮನಿ, ದುರಗಪ್ಪ ನಾಗರಾಳ, ಮಲ್ಲಿಕಾರ್ಜುನ ಮಂದಾಲೆ, ಮಲ್ಲು ಬಿಲ್ಲವ್ ಚಂದ್ರು, ದೀವಳಗುಡ್ಡ ಬಸವರಾಜ ಮುಷ್ಠಳ್ಳಿ, ಭೀಮಣ್ಣ ದೀವಳಗುಡ್ಡ, ರಾಜು ದೀವಳಗುಡ್ಡ ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.